Tuesday, July 16, 2024
ಮನೆಬಿಸಿ ಬಿಸಿ ಸುದ್ದಿರಾಜ್ಯದ ಜನರ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ಯೋಜನೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಜನರ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ಯೋಜನೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಗುರುಮಠಕಲ್ ಪಟ್ಟಣದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ 1.50 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುತ್ತಿದೆ. 4.30 ಕೋಟಿ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ 65 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಯುವನಿಧಿ ಯೋಜನೆಯಡಿಯಲ್ಲಿ 1.30 ಕೋಟಿ ಯುವಕರಿಗೆ ಲಾಭ ಸಿಗುತ್ತಿದೆ. ರಾಜ್ಯದ 6.50 ಕೋಟಿ ಜನರಲ್ಲಿ ಅಂದಾಜು 4.80 ಕೋಟಿ ಜನರು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ವಾರ್ಷಿಕ 52,000 ಕೋಟಿ ಅನುದಾನ ಬಳಕೆ ಮಾಡಲಾಗುತ್ತಿದೆ. ಇಂತಹ ಜನ ಪರ ಯೋಜನೆಗಳನ್ನು ಬಿಜೆಪಿಗರು ಬಿಟ್ಟಿ ಭ್ಯಾಗ್ಯ ಎಂದು ಟೀಕಿಸುತ್ತಿದ್ದಾರೆ. ನಾವು ನಿಮ್ಮ ದುಡ್ಡನ್ನು ನಿಮಗೆ ವಾಪಸ್ ಕೊಡಬೇಕು ಎಂದು ಈ ಯೋಜನೆ ಜಾರಿಗೆ ತಂದಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಅಧಿಕಾರಲ್ಲಿದ್ದಾಗ ನಿಮ್ಮ ದುಡ್ಡನ್ನು ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಉಮೇಶ್ ಜಾಧವ ಕಲಬುರಗಿ ಸಂಸದರಲ್ಲ ಅವರೇನಿದ್ದರೂ ಚಿಂಚೋಳಿ ಎಂಪಿ. ನಮ್ಮ ಪಕ್ಷವನ್ನು ಹಾಗೂ ನಾಯಕರನ್ನು ಟೀಕಿಸುವಾಗ ಮಾತ್ರ ಅವರು ಬಾಯಿ ತೆಗೆಯುತ್ತಾರೆ. ಆದರೆ ಅಭಿವೃದ್ದಿ ವಿಚಾರ ಬಂದಾಗ ಮೌನವಾಗಿರುತ್ತಾರೆ. ಹಾಗಾಗಿ ಕಲಬುರಗಿ ಹಾಗೂ ಗುರುಮಿಟ್ಕಲ್ ಅಭಿವೃದ್ದಿಗೆ ಅವರ ಕೊಡುಗೆ ಶೂನ್ಯ ಎಂದು ಟೀಕಿಸಿದರು.

ರಾಜ್ಯ ಭೀಕರ ಬರಗಾಲ ಎದುರಿಸುತ್ತಿದೆ. 40 ಲಕ್ಷ ಹೆಕ್ಟರ್ ಬೆಳೆ ಹಾನಿಯಾಗಿದೆ. 18171 ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಅನುದಾನ ಬಿಡುಗಡೆ ಮಾಡಲಿಲ್ಲ.

ಬಿಜೆಪಿಯವರು ಈ ಹಿಂದೆ ನೀಡಿದ ಭರವಸೆಯಂತೆ ಕೋಲಿ ಹಾಗೂ ಕಬ್ಬಲಿಗ ಸಮಾಜವನ್ನು ಎಸ್ ಟಿ ಸೇರಿಸಬೇಕಾಗಿತ್ತು ಆದರೆ ಸಂಸದ ಈ ವಿಚಾರದಲ್ಲಿ ಯಾವ ಪ್ರಯತ್ನ ಮಾಡಲಿಲ್ಲ. ಇದು ಈ ಸಮಾಜಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಅರ್ಧಪಾಲು ರಾಜ್ ಸರ್ಕಾರದ್ದೂ ಇದೆ. ಆದರೆ, ಕೇಂದ್ರ ಸರ್ಕಾರ ಇವುಗಳನ್ನು ತನ್ನದೇ ಗ್ಯಾರಂಟಿ ಎಂದು ಬಿಂಬಿಸುತ್ತಿದೆ ಎಂದು ಕುಟುಕಿದರು.

ಖರ್ಗೆ ಸಾಹೇಬರ ಕರ್ಮಭೂಮಿಯಾದ ಗುರುಮಠಕಲ್ ಕ್ಷೇತ್ರದ ಜನರು ಈ ಸಲ ರಾಧಾಕೃಷ್ಣ ಅವರಿಗೆ ಗೆಲ್ಲಿಸಬೇಕು. ಯಾಕೆಂದರೆ ಈ ಭಾಗ ಕಳೆದ ಐದು ವರ್ಷದಿಂದ ಅಭಿವೃದ್ದಿಯಿಂದ ವಂಚಿತವಾಗಿದೆ. ಅಭಿವೃದ್ದಿ ಹಾಗೂ ಯುವಕರ ಭವಿಷ್ಯದ ಹಿತದೃಷ್ಠಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಅಭ್ಯರ್ಥಿ ರಾಧಾಕೃಷ್ಣ ಅವರು ಮಾತನಾಡಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯ ಸ್ವಾಗತ ನೀಡಿದ್ದೀರಿ. ಈ ಕ್ಷೇತ್ರ ರಾಷ್ಟ್ರಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. ಖರ್ಗೆ ಸಾಹೇಬರು ವಿಧಾನಸಭೆ ಸತತ ಎಂಟು ಸಲ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಜಗನ್ನಾಥ್ ರಾವ್ ಚಂಡ್ರಕಿ ಹಾಗೂ ಕೋಯಿಲೂರು ಮಲ್ಲಪ್ಪ ಅವರಂತವರು ಇಲ್ಲಿ ಸಂಸದರಾಗಿ ಆಯ್ಕೆ‌ಯಾಗಿ ಹೋಗಿದ್ದಾರೆ. ಈ ಸಲ ನನಗೆ ಅವಕಾಶ ಸಿಕ್ಕಿದೆ. ಹಾಗಾಗಿ ಅತ್ಯಂತ ಹೆಚ್ಚಿನ ಲೀಡ್ ತಂದು ಗೆಲ್ಲಿಸಿ ಎಂದರು.

ಸಚಿವರಾದ ಶರಣಪ್ರಕಾಶ ಪಾಟೀಲ ಮಾತನಾಡಿ ರಾಧಾಕೃಷ್ಣ ಅವರು ಕಳೆದ ಮೂರು ದಶಕಗಳಿಂದ ಈ ಭಾಗದ ಜನರೊಂದಿಗೆ ಒಡನಾಟವಿಟ್ಟುಕೊಂಡಿದ್ದಾರೆ. ಗುರುಮಠಕಲ್ ನಲ್ಲಿ ಬಿಜೆಪಿ ಪಕ್ಷ ಇಲ್ಲ. ಇಲ್ಲಿ ಮುಖಂಡರೇ ಇಲ್ಲ. ರಾಧಾಕೃಷ್ಣಅವರನ್ನು ಗೆಲ್ಲಿಸಿ ಆ ಮೂಲಕ ಅಭಿವೃದ್ದಿ ಮಾಡಲು ಆಶೀರ್ವದಿಸಿ ಎಂದು ಮನವಿ ಮಾಡಿದರು.

ಸಚಿವರಾದ ಶರಣಬಸಪ್ಪ ದರ್ಶನಾಪುರ ಮಾತನಾಡಿ ದೇಶಕ್ಕೆ ಗುರುಮಠಕಲ್ ಕ್ಷೇತ್ರ ಮಲ್ಲಿಕಾರ್ಜುನ ಖರ್ಗೆ ಎನ್ನುವ ಮಹಾನ್ ನಾಯಕನನ್ನು ಕೊಡುಗೆಯಾಗಿ ಕೊಟ್ಟಿದೆ. ಅವರ ಅಭಿವೃದ್ದಿಪರ ಚಿಂತನೆ ಈ ಭಾಗದಲ್ಲಿ ಬೆಳವಣಿಗೆಯಾಗಲು ಸಹಕಾರಿಯಾಗಿದೆ. ಆರ್ಟಿಕಲ್ 371(J) ಈ ಭಾಗದ ಜನರಿಗೆ ಅವರು ನೀಡಿದ ಅಮೂಲಾಗ್ರ ಕೊಡುಗೆಯಾಗಿದೆ. ಈಗ ಅವರ ಮಾರ್ಗದರ್ಶನದಲ್ಲಿಯೇ ರಾಧಾಕೃಷ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರನ್ನು ನೀವು ಗೆಲ್ಲಿಸಿ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ಎಲ್ಲ ರಂಗದಲ್ಲಿ ವಿಫಲವಾಗಿದೆ. ಈ ಬಗ್ಗೆ ಮಾತನಾಡಬೇಕಿದ್ದ ರಾಜ್ಯದ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಕಲಬುರಗಿ ಸಂಸದ ಈ ಭಾಗದ ಜನರ ಸಂಕಷ್ಟಗಳಿಗೆ ಧನಿಯಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಮಾತನಾಡಿ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿ‌ ಸೇರಿಸುವಾಗಿ ಭರವಸೆ ನೀಡಿ ನನ್ನನ್ನು ಬಿಜೆಪಿಗೆ ಕರದೊಯ್ದ ಜಾಧವ ನಂತರ ಮೋಸ ಮಾಡಿದ್ದಾರೆ. ಅವರ ಮಾತನ್ನು ನಂಬಿ ನಾನು ಬಿಜೆಪಿ ಹೋದೆ ಎಂದು ಟೀಕಿಸಿದರು.

ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಚುನಾವಣೆಯಲ್ಲಿ ಮೂವತ್ತು ಸಾವಿರ ಮತಗಳಿಂದ ಗೆದ್ದಿದ್ದರು. ಈ ಸಲ ನೀವು ರಾಧಾಕೃಷ್ಣ ಅವರಿಗೆ ಅರವತ್ತು ಸಾವಿರ ಮತಗಳಿಂದ ಗೆಲ್ಲಿಸಬೇಕು. ಯಾಕೆಂದರೆ ಅವರು ಬಡವರ ಕಣ್ಣೀರು ಒರೆಸುವ ಮನಸಿನವರು. ಕಲಬುರಗಿ ಗೆ ಬಂದವರು ಶರಣಬಸವೇಶ್ವರ ದೇವಾಸ್ಥಾನಕ್ಕೆ ಹೋದಂತೆ ಬೆಂಗಳೂರಿಗೆ ಹೋದವರು ರಾಧಾಕೃಷ್ಣ ಅವರ ಮನೆಗೆ ಹೋಗುತ್ತಾರೆ. ಕಾರಣ ಅವರ ಬಳಿಗೆ ಹೋದವರ ಸಮಸ್ಯೆ ಬಗೆಹರಿಸುತ್ತಾರೆ ಎಂದರು.

ಇದಕ್ಕೂ ಮುನ್ನ ಅದ್ದೂರಿ ಮೆರವಣಿಗೆ ಮೂಲಕ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಕಾರ್ಯಕ್ರಮದ ವೇದಿಕೆಗೆ ಕರೆ ತರಲಾಯಿತು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಬಸರೆಡ್ಡಿ ಅನಪೂರ, ಜಗದೇವ ಗುತ್ತೇದಾರ, ಮಾಜಿ ಎಂ ಎಲ್ ಸಿ ಶರಣಪ್ಪ ಮಟ್ಟೂರು, ಡೇವಿಡ್ ಸಿಮೆಯೋನ್, ಮರಿಗೌಡ ಪಾಟೀಲ ಹುಲಕಲ್, ಶ್ರೇಣಿಕ್ ಕುಮಾರ ದೋಖಾ, ಚಿದಾನಂದಪ್ಪ ಕಾಳಬೆಳಗುಂದಿ, ಭೀಮಣ್ಣ ಮೇಟಿ,

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular