ಕಲಬುರಗಿ: ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿ ಹಿಂದೂ ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ ವಿರುದ್ಧ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಅವರು ಕಲಬುರಗಿ ಚುನಾವಣಾಧಿಕಾರಿಗಳ ಮೂಲಕ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಜೆಪಿ ನಾಯಕ ಆರ್. ಅಶೋಕ ಅವರ ಈ ನಡೆಯು ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ ಆಗಿದೆ ಮತ್ತು ಹಿಂದೂ ಸಂಸ್ಕೃತಿ ಪಾಲಿಸುವ ಕೋಟ್ಯಂತರ ಹಿಂದೂಗಳ ಭಾವನೆಗೆ ದಕ್ಕೆ ತಂದಿದ್ದಾರೆ ಹಾಗಾಗಿ, ಹಿಂದೂ ಸಂಸ್ಕೃತಿಗೆ ಅವಮಾನ ಮಾಡಿದ ಆರ್. ಅಶೋಕ ಅವರ ವಿರುದ್ಧ ತಮ್ಮ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು. ವಿಚಾರಣೆ ನಡೆಸಿ,ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಬೇಕು ಎಂದು ಈ ದೂರಿನಲ್ಲಿ ಹೇಳಲಾಗಿದೆ.
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಸದಾ ಹಿಂದೂ, ಹಿಂದುತ್ವ ಪಠಿಸುವ ಬಿಜೆಪಿ ನಾಯಕರಿಂದ ಇಂತಹ ನಡೆ ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಅವರದ್ದು ಡೋಂಗಿ ಮತ್ತು ನಕಲಿ ಹಿಂದುತ್ವಕ್ಕೆ ಇದೊಂದು ದೊಡ್ಡ ಪುರಾವೆ ಎಂದು ದುರುದಾರರು ಆರೋಪಿಸಿದ್ದಾರೆ. ಜಿಲ್ಲಾ ಚುನಾವಣೆ ಅಧಿಕಾರಿಗಳ ಮೂಲಕ ಸಲ್ಲಿಕೆಯಾದ ಈ ದೂರು ರಾಜ್ಯ ಮತ್ತು ಕೇಂದ್ರ ಚುನಾವಣೆ ಆಯೋಗಕ್ಕೆ ವರ್ಗಾವಣೆ ಆಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.