ಡಾ.ಶಿವಕುಮಾರ ಸ್ವಾಮೀಜಿಗಳ ಸೇವೆ ಸಮಾಜಕ್ಕೆ ಮಾದರಿ

0
25

ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ,ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ,ಮಾನವೀಯೆತೆಯನ್ನು ನೀಡಿ, ಅವರ ಬದುಕನ್ನು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ. ಪರಹಿತ, ಸಮಾಜ ಸೇವೆಯಲ್ಲಿಯೇ ಶಿವನನ್ನು ಕಂಡು ದೈವತ್ವಕ್ಕೇರಿದ ಮಹಾನ ಚೇತನ ಅವರಾಗಿದ್ದು, ಅವರ ಸೇವೆ ಸಮಾಜಕ್ಕೆ ಸದಾ ಮಾದರಿಯಾಗಿದೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ತತ್ವವನ್ನು ಅಕ್ಷರಶಃ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ಬದುಕಿ ತೋರಿಸಿದವರು. ದಾಸೋಹ,ಕಾಯಕ ಸಂಸ್ಕøತಿ,ಸಮಾನತೆ, ಸಾಮರಸ್ಯ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಗುಣ ಪೂಜ್ಯರದಾಗಿತ್ತು. ಸಮಾಜಕ್ಕಾಗಿ ನಿರಂತರವಾಗಿ ದಣಿವರಿಯದೆ ಸಾರ್ಥಕ ಸೇವೆಯನ್ನು ಸಲ್ಲಿಸಿ ಲಕ್ಷಾಂತರ ಜನರ ಹೃದಯ ಮಂದಿರದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಸಿಬ್ಬಂದಿಗಳಾದ ಪೂಜಾ ಜಮಾದಾರ, ಶೃತಿ ಚವ್ಹಾಣ, ಸೋಹೆಲ್ ಶೇಖ್, ರಜನಿಕಾಂತ, ರತ್ನಾಬಾಯಿ, ಶ್ವೇತಾ, ಸೌಭಾಗ್ಯ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here