ಬಿಸಿ ಬಿಸಿ ಸುದ್ದಿ

ಭಗತ್ ಸಿಂಗ್ ರವರ 94ನೇ ಹುತಾತ್ಮ ದಿನಾಚರಣೆ

ಕಲಬುರಗಿ; ಧೀರ ಹುತಾತ್ಮ ಭಗತ್ ಸಿಂಗ್ ರವರ 94ನೇ ಹುತಾತ್ಮ ದಿನದ ಅಂಗವಾಗಿ AIDSO AIDYO AIMSS ಸಂಘಟನೆಗಳಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ ಜರುಗಿತು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಹಿರಿಯ ಪತ್ರಕರ್ತ ಪ್ರಭಾಕರ್ ಜೋಶಿ ಅವರು ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್ ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದರು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಹಾಗೂ ಪ್ರಾಧ್ಯಾಪಕರಾದ ಡಾ. ಶಿವಗಂಗಾ ರುಮ್ಮ ರವರು ಮಾತನಾಡುತ್ತ ಭಗತ್ ಸಿಂಗ್ ರವರು ತಮ್ಮ ಚಿಕ್ಕವಯಸ್ಸಿನಿಂದಲೇ ವೈಚಾರಿಕ ಸ್ಪಷ್ಟತೆಯೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಎತ್ತಿ ಹಿಡಿದ ಸಮಾಜವಾದಿ ಭಾರತದ ಕನಸನ್ನು ಜನಮಾನಸದಲ್ಲಿ ಮೂಡಿಸಲು ಪ್ರಯತ್ನಿಸಿದರು. ಅವರು ಜೈಲಿನಲ್ಲಿ ಬರೆದಂತಹ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥದಲ್ಲಿ ತೀಕ್ಷ್ಣವಾದ ವೈಚಾರಿಕ ತಳಹದಿಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಹೇಗೆ ಮಾನವನಿಂದ ಮಾನವನ ಶೋಷಣೆಯನ್ನು ತಡೆಗಟ್ಟಲು ನಾವು ಶ್ರಮಿಸಬೇಕು, ಹಳೆ ವಿಚಾರ ಸಂಪ್ರದಾಯಗಳನ್ನು ಮುರಿದು ವೈಜ್ಞಾನಿಕ ಆಲೋಚನಾ ತಳಹದಿಯನ್ನು ಪಡೆದುಕೊಳ್ಳಬೇಕು ಎಂಬ ತಮ್ಮ ಹರಿತವಾದ ಬರಹದಿಂದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮೇಲೆ ತುಂಬಾ ಗಾಢವಾದ ಪರಿಣಾಮವನ್ನು ಬೀರಿದ್ದಾರೆ. ಇಂದಿನ ಯುವಜನರು ಅವರ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥವನ್ನು ತಪ್ಪದೆ ಓದಿ ಯುವಜನರು ವೈಚಾರಿಕವಾಗಿ ರಾಜಕೀಯವಾಗಿ ಪ್ರಭುದ್ಧರಾಗಬೇಕೆಂದು ಅವರು ಕರೆ ನೀಡಿದರು.

ಈ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಎಐಡಿವೈಓ ನ ಜಿಲ್ಲಾಧ್ಯಕ್ಷ ಜಗನ್ನಾಥ್ ಎಸ್ ಹೆಚ್ ರವರು ಆಗಮಿಸಿ ಮಾತನಾಡಿದರು. ಹಾಗೂ ಪ್ರಾಸ್ತವಿಕವಾಗಿ ಎ ಐ ಡಿ ಎಸ್ ಓ ಜಿಲ್ಲಾ ಕಾರ್ಯದರ್ಶಿ ತುಳಜಾರಾಮ್ ಏನ್ ಕೆ ರವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ ಐ ಎಂ ಎಸ್ ಎಸ್ ಜಿಲ್ಲಾಧ್ಯಕ್ಷ ಗುಂಡಮ್ಮ ಮಡಿವಾಳ ರವರು ವಹಿಸಿಕೊಂಡಿದ್ದರು.

ಕಲಬುರಗಿ ಜಿಲ್ಲೆಯ ಹಲವು ಭಾಗಗಳಿಂದ ವಿದ್ಯಾರ್ಥಿಗಳು ಯುವಜನತೆ ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಂತರ ಜಿಲ್ಲೆಯ ಬೇರೆ ಬೇರೆ ಕಡೆಗಳಿಂದ ಬಂದಿರುವ ಕಲಾವಿದರಿಂದ ನಾಟಕ ಡೊಳ್ಳಿನ ಕುಣಿತ ಲಾವಣಿ ಗುಂಪು ಗಾಯನ ಇಂತಹ ಸಂಸ್ಕೃತಿಕ ಚಟುವಟಿಕೆಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಸೇರಿರುವ ಸಭಿಕರನ್ನು ಒಳಗೊಂಡಿರುವ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago