ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-೨೦೧೯ರ ಅಂಗವಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಸೆಪ್ಟೆಂಬರ್ ೧೭ರಂದು ಬೆಳಿಗ್ಗೆ ೯.೧೫ ಗಂಟೆಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ನಂತರ ಅಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಎಂ.ವೈ.ಪಾಟೀಲ್, ಸುಭಾಷ ಆರ್.ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಕನೀಜ್ ಫಾತೀಮಾ, ಡಾ. ಅವಿನಾಶ ಜಾಧವ ಹಾಗೂ ವಿಧಾನ ಪರಿಷತ್ತಿನ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ.ಚಂದ್ರಶೇಖರ ಪಾಟೀಲ್, ತಿಪ್ಪಣ್ಣ ಕಮಕನೂರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಕಲಬುರಗಿ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…