ಕಲಬುರಗಿ: ಎಸ್ಪಿ ಯಡಾ ಮಾರ್ಟಿನ್ ವರ್ಗಾವಣೆಗೆ ರಾಜ್ಯ ಹೈ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮಾರ್ಟಿನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಅ.19 ರಂದು ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ವಿನಾಯಕ್ ಪಾಟೀಲ ಅವರನ್ನುವರ್ಗಾವಣೆ ಮಾಡಿ ಕಲಬುರಗಿಗೆ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿತ್ತು. ಸರಕಾರದ ಈ ನಿರ್ಧಾರ ಪ್ರಶ್ನಿಸಿ, ಅವಧಿಗೆ ಮುಂಚೆ ವರ್ಗಾವಣೆ ಪ್ರಶ್ನಿಸಿ ಯಡಾ ಮಾರ್ಟಿನ್ ಹೈ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯ ಮೂರ್ತಿ ಎಲ್. ನಾರಾಯಣಸ್ವಾಮಿ ಮತ್ತು ಆರ್. ದೇವದಾಸ್ ಅವರನ್ನೊಳಗೊಂಡ ಪೀಠ ಯಡಾ ಮಾರ್ಟೀನ್ ಅವರ ವರ್ಗಾವಣೆಗೆ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.
ಹೈ ಕೋರ್ಟ್ ಆದೇಶದ ಪ್ರತಿ ಪೊಲೀಸ್ ಮಹಾ ನಿರ್ದೇಶಕರಿಗೆ ತಲುಪಿದ ನಂತರ ಅಧಿಕೃತ ಆದೇಶ ಹೊರಬರಬೇಕಿದೆ. ಸುದ್ದಿ ಮೂಲಗಳ ಪ್ರಕಾರ ನಾಳೆ ಅಥವಾ ಮಂಗಳವಾರ ಯಡಾ ಮರ್ಟಿನ್ ಮತ್ತೆ ಅಧಿಕಾರ ಸ್ವೀಕರಿಸಲಿದ್ದಾರೆಂದು ಮಾಹಿತಿ ಕೇಳಿಬರುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…