ಬಿಸಿ ಬಿಸಿ ಸುದ್ದಿ

ಭದ್ರ ಭವಿಷ್ಯ ರೂಪಿಸಲು ತಪ್ಪದೇ ಮತ ಚಲಾಯಿಸಿ

ಕಲಬುರಗಿ: ಪ್ರಜಾಪ್ರಭುತ್ವದ ಯಶಸ್ಸು ಮತದಾರರ ಕೈಯಲ್ಲಿದ್ದು, ದೇಶದ ಭದ್ರ ಭವಿಷ್ಯ ರೂಪಿಸಲು ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕ ಪಂಚಾಯತ ಜೇವರ್ಗಿ ಹಾಗೂ ಸ್ವೀಪ್‌ ಸಮಿತಿ ಅಧ್ಯಕ್ಷ ರೇವಣಸಿದ್ದಪ್ಪ ಕೆ.ಗೌಡರ್‌ ರವರು ಹೇಳಿದರು.

ಜೇವರ್ಗಿ ಪಟ್ಟಣದಲ್ಲಿ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಮಂಗಳವಾರ ಇಲ್ಲಿನ ರಿಲಾಯನ್ಸ್‌ ಪೆಟ್ರೋಲ್‌ ಬಂಕ್‌ ನಿಂದ ಕೇಂದ್ರ ಬಸ್‌ ನಿಲ್ದಾಣದವರೆಗೆ ಹಮ್ಮಿಕೊಂಡಿರುವ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಮತದಾನ ನಮ್ಮ ಹಕ್ಕಾಗಿದ್ದು, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

ನಂತರ ಚುನಾವಣೆ ಸಹಾಯಕ ಅಧಿಕಾರಿ ಕೃಷ್ಣಾ ಸಂತಪುರ ಅವರು ಮಾತನಾಡಿ ಯಾವುದೇ ಆಮಿಷಕ್ಕೆ ಮರುಳಾಗದೆ ವಿವೇಚನೆಯಿಂದ ಮತ ಚಲಾಯಿಸಿ ಜವಬ್ಧಾರಿ ಮೇರೆಯಿರಿ ಎಂದರು.

ಪಟ್ಟಣದ ರಿಲಾಯನ್ಸ್‌ ಪೆಟ್ರೋಲ್‌ ಬಂಕ್‌ ನಿಂದ ಇಲ್ಲಿನ ಕೇಂದ್ರ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿ ಮತದಾನ ಜಾಗೃತಿ ಘೋಷ್ಯವಾಕ್ಯಗಳನ್ನ ಕೂಗುತ್ತ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅರಿವು ಮೂಡಿಸಲಾಯಿತು.

ಬಳಿಕ ಕೇಂದ್ರ ಬಸ್‌ ನಿಲ್ದಾಣದಲ್ಲಿ ಮತದಾನ ಪ್ರತಿಜ್ಙಾ ವಿಧಿ ಬೋಧಿಸಲಾಯಿತು.

ತಾಲೂಕ ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ತಾಲೂಕ ಚುನಾವಣೆ ಸಹಾಯಕ ಅಧಿಕಾರಿ ಕೃಷ್ಣಾ ಸಂತಪುರ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರ ಸೋಮಶೇಖರ ಜಾಡರ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕು.ದೀಪಿಕಾ ಬಿ.ವಿ, ತಾ.ಪಂ ವ್ಯವಸ್ಥಾಪಕ ಸುಭಾಷ್‌ ಎಸ್.‌ ಹೊಸಮನಿ, ಐಇಸಿ ಸಂಯೋಜಕ ಚಿದಂಬರ ಪಾಟೀಲ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಎನ್.ಆರ್‌ ಎಲ್‌ ಸಂಯೋಜಕರು ಸೇರಿದಂತೆ ತಾಲೂಕ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

11 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

11 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

11 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

11 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

11 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

12 hours ago