ಕಲಬುರಗಿ: ಜೈ ಭಾರತ ಮಾತಾ ಸೇವಾ ಸಮಿತಿಯಿಂದ ಏ.5ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 117 ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಎಸ್.ಝಳಕಿ ತಿಳಿಸಿದರು.
ಜೈ ಭಾರತ ಮಾತಾ ಸೇವಾ ಸಮಿತಿ ರಾಷ್ಟ್ರೀಯ ಸಂಸ್ಥಾಪಕ ಪೂಜ್ಯ ಹವಾ ಮಲ್ಲಿನಾಥ ನಹಾರಾಜ ನಿರಗುಡಿ ಸಾನ್ನಿಧ್ಯದಲ್ಲಿ ಅದ್ಧೂರಿಯಾಗಿ ಜಯಂತ್ಯುತ್ಸವ ಆಚರಿಸಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏ.5 ಎಂದು ಬೆಳಗ್ಗೆ 10ಕ್ಕೆ ನಗರದ ಹೀರಾಪುರ ಹತ್ತಿರದಲ್ಲಿ ಇರುವ ಗಣೇಶ ಲಿಂಗ ಹವಾ ಮಲ್ಲಿನಾಥ ಆಶ್ರಮದಿಂದ ಅನ್ನಪೂರ್ಣ ಕ್ರಾಸ್ ಸಮೀಪದ ಡಾ.ಜಗಜೀವನರಾಮ್ ಪುತ್ಥಳಿ ವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಹಲಗೆ ನಾದದೊಂದಿಗೆ ವಿವಿಧ ಕಲಾ ಪ್ರದರ್ಶನದೊಂದಿಗೆ ನಗರದ ಆಳಂದ ಚೆಕ್ ಪೋಸ್ಟ್ ಮಾರ್ಗವಾಗಿ ಸೂಪರ್ ಮಾರ್ಕೆಟ್ ಮೂಲಕ ಡಾ.ಜಗಜೀವನರಾಮ್ ಪುತ್ಥಳಿ ವರೆಗೆ ಮೆರವಣಿಗೆ ಜರುಗಲಿದೆ ಎಂದರು.
ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ನಂತರ ಕಲೆ, ಶಿಕ್ಷಣ, ಸಮಾಜ ಸೇವೆ, ಕೃಷಿ, ಮಾಧ್ಯಮ, ವೈದ್ಯಕೀಯ, ಕಾರ್ಮಿಕ ಸಾಧಕರಿಗೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು.
ಗುಂಡಪ್ಪ ಸಿರಡೋಣ, ಪರಮೇಶ್ ಆಲಗೋಡ, ದತ್ತು ಹೈಯಾಳಕರ್, ಎಂ.ಎಸ್.ಪಾಟೀಲ್ ನರಿಬೋಳ, ಸಂದೇಶ ಪವಾರ್, ರಾಮಪ್ರಸಾದ ಹೊಡಲ್ ಇತರರಿದ್ದರು.