ಕಮಲಾಪುರ: ತಾಲೂಕಿನ ಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬೆಳಕೋಟ ಗ್ರಾಮದಲ್ಲಿ ಕೆರೆ ಹೊಳೆತುವ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರು ತೊಡಗಿದರು ಸ್ಥಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲಾಯಿತು.
ತಾಲೂಕ IEC ಗಿರೀಶ ಇಂಡಿ ಇವರಿಂದ ಕೂಲಿ ಕಾರ್ಮಿಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಸ್ಥಳದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.