ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬ ಮತದಾರರು ಮತ ಚಲಾಯಿಸಿ ಕರ್ತವ್ಯ ನಿರ್ವಹಿಸಬೇಕು

ಶಹಾಬಾದ: ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು, ಮತ ಚಲಾವಣೆ ಹಕ್ಕನ್ನು ಪಡೆದಿರುವ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ಬುಧವಾರ ಭಾರತ ಚುನಾವಣಾ ಆಯೋಗ,ನಗರಸಭೆ ಶಹಾಬಾದ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ನಿಮಿತ್ತ ಬುಧವಾರ ನಗರದಲ್ಲಿ ಆಯೋಜಿಸಲಾದ ಮತದಾರರ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು, ಮತ ಚಲಾವಣೆ ಹಕ್ಕನ್ನು ಪಡೆದಿರುವ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.ವಿಶ್ವದಲ್ಲಿ ನಮ್ಮ ದೇಶ ದೊಡ್ಡ ಪ್ರಜಾಪ್ರಭುತ್ವದ ದೇಶವಾಗಿ ಹೊರಹೊಮ್ಮಿದೆ. ನಮ್ಮ ದೇಶದ ಸಂವಿಧಾನದ ಪ್ರಕಾರ ಸರ್ಕಾರವನ್ನು ಆಯ್ಕೆ ಮಾಡುವ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಮತ ಚಲಾವಣೆಯ ಹಕ್ಕನ್ನು ನೀಡಲಾಗಿದೆ.

ಮತದಾನ ಎಂಬುದು ನಮ್ಮ ದೇಶದಲ್ಲಿ 18 ವರ್ಷ ಪೂರೈಸಿದವರಿಗೆ ಸಂವಿಧಾನಾತ್ಮಕವಾಗಿ ದೊರೆತ ಹಕ್ಕಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಮತ ಚಲಾವಣೆ ಮಾಡುವ ಮೂಲಕ ತಮ್ಮ ಕರ್ತವ್ಯ ಪಾಲನೆ ಮಾಡಬೇಕು ಎಂದು ತಿಳಿಸಿದರು.ಭಾರತ ಚುನಾವಣಾ ಆಯೋಗ ದೇಶದ ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗದಂತೆ ಜಾಗೃತಿ ಮೂಡಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ಮತ ಚಲಾವಣೆ ಮಾಡುವ ಕುರಿತು ಆಯೋಜಿಸಲಾಗಿರುವ ಈ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ತಾಪಂ ಇಓ ಮಲ್ಲಿನಾಥ ರಾವೂರ ಮಾತನಾಡಿ, ಜನರು ಹೆಚ್ಚು ಮತದಾನದಲ್ಲಿ ಪಾಲ್ಗೊಳ್ಳುವುದರಿಂದ ಜನರಿಗೆ ಬೇಕಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅನುಕೂಲ ಆಗುತ್ತದೆ. ನಮ್ಮ ಉದ್ದೇಶ ಮತದಾರರಲ್ಲಿ ಜಾಗೃತಿ ಮೂಡಿಸುವುದು. ಮತದಾನದ ದಿವಸ ಹೆಚ್ಚಿನ ಜನರನ್ನು ಮತಗಟ್ಟೆಗೆ ಕರೆದುಕೊಂಡು ಬಂದು ಮತ ಹಾಕಿಸುವುದು ನಮ್ಮ ಗುರಿ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ನಗರದ ಮುಖ್ಯ ರಸ್ತೆಗಳಾದ ರೇಲ್ವೆ ನಿಲ್ದಾಣ,ಬಸ್ ನಿಲ್ದಾಣ, ಭಾರತ್ ಚೌಕ್,ತ್ರಿಶೂಲ್ ಚೌಕ್,ಶಾಸ್ತ್ರಿ ಚೌಕ್, ತ್ರಿಶೂಲ್ ಚೌಕ್, ಮಜ್ಜಿದ್ ಚೌಕ್,ನೆಹರು ಚೌಕ್ ಮುಖಾಂತರ ನಗರಸಭೆಯವರೆಗೆ ಜಾಗೃತಿ ಜಾಥಾ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಡಿಪಿಓ ಡಾ.ವಿಜಯಲಕ್ಷ್ಮಿ ಹೇರೂರ್, ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ, ಸಮುದಾಯ ಸಂಘಟನಾಧಿಕಾರಿ ರಘುನಾಥ ನರಸಾಳೆ,ಜೆಇಗಳಾದ ಸಿದ್ದಪ್ಪ ಸೋಂಪೂರ್,ರಬ್ಬಾನಿ, ಶಿವಕುಮಾರ ಜೆಟ್ಟೂರ್,ಸಾಬಣ್ಣ ಸುಂಗಲಕರ್, ನಾರಾಯಣ ರೆಡ್ಡಿ,ಈರಣ್ಣ ಕುರಿ, ಅನೀಲಕುಮಾರ ಹೊನಗುಂಟಿಕರ್,ಹುಣೇಶ ದೊಡ್ಡಮನಿ ಸೇರಿದಂತೆ ಪೌರಕಾರ್ಮಿಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago