ಬಿಸಿ ಬಿಸಿ ಸುದ್ದಿ

ಬಿಜೆಪಿ ಸರಕಾರದ ದುರಾಡಳಿತ ಕಿತ್ತೊಗೆಯಲು ಸಿಪಿಐ ಪಕ್ಷ ಕಾಂಗ್ರೆಸ್ ಬೆಂಬಲಿಸಲಿದೆ

ಸುರಪುರ: ದೇಶದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದ ಕೇಂದ್ರ ಸರಕಾರವನ್ನು ಕಿತ್ತೊಗೆಯಲು ನಮ್ಮ ಭಾರತ ಕಮ್ಯುನಿಸ್ಟ್ (ಸಿಪಿಐ) ಪಕ್ಷ ಈಬಾರಿ ನಮ್ಮ ರಾಷ್ಟ್ರ ನಾಯಕರ ಸೂಚನೆಯಂತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿ ವಸಂತ ಮಹಲ್ ಆವರಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ ಕೇಂದ್ರ ಸರಕಾರ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ.ಜಾತಿ ಧರ್ಮಗಳ ಹೆಸರಿನಲ್ಲಿ ದುರಾಡಳಿತ ನಡೆಸುತ್ತಿದೆ,ರೈತರು ವರ್ಷಗಟ್ಟಲೆ ಹೋರಾಟ ನಡೆಸಿದರು ರೈತ ವಿರೋಧಿ ಕಾಯಿದೆಗಳನ್ನು ರದ್ದುಗೊಳಿಸುತ್ತಿಲ್ಲ,ಪೆಟ್ರೋಲ್ ಡಿಸೆಲ್ ಸೇರಿದಂತೆ ಇಂಧನ ಬೆಲೆ ಗಗನಕ್ಕೇರಿದೆ,ಭ್ರಷ್ಟಾಚಾರ ನಡೆಸುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದ ಬಿಜೆಪಿ ಈಗ ಚುನಾವಣಾ ಬಾಂಡ್ ಹೆಸರಲ್ಲಿ ಜಗತ್ತಿನಲ್ಲಿಯೇ ಅತಿ ದೊಡ್ಡ ಭ್ರಷ್ಟಾಚಾರ ಮಾಡಿದೆ,ಭ್ರಷ್ಟಾಚಾರದ ಮೂಲಕ ಬಿಜೆಪಿ ಆಡಳಿತ ನಡೆಸಿದ 10 ವರ್ಷದಲ್ಲಿಯೇ 18 ಸಾವಿರ ಕೋಟಿ ರೂಪಾಯಿ ಪಕ್ಷದ ಹೆಸರಲ್ಲಿ ಸಂಗ್ರಹಿಸಿದೆ,ಗೋಮಾಂಸದ ಹೆಸರಲ್ಲಿ ಅಮಾಯಕರ ಮೇಲೆ ದರ್ಪ ಮೆರೆಯುತ್ತದೆ,ಆದರೆ ಆಡಳಿತ ನಡೆಸುವವರೆ ಗೋಮಾಂಸ ರಫ್ತು ನಿಲ್ಲಿಸಲಾಗುವುದಿಲ್ಲ ಎಂದು ಹೇಳುತ್ತಾರೆ.

ಇಂದು ವಿಶ್ವಬ್ಯಾಂಕ್‍ಲ್ಲಿ ಮೋದಿಯವರು ಸಾಲ ಕೇಳಲು ಹೋದರೆ ಸಾಲು ಕೊಡುವುದಿಲ್ಲ ದೇಶ ದಿವಾಳಿಯಾಗಿದೆ ಎನ್ನುತ್ತಾರೆ, ಹಿಂದು,ಮುಸ್ಲಿಂ ಗಂಡು ಹೆಣ್ಣು ಒಂದಾಗಿ ಹೋದರೆ ನೈತಿಕ ಪೊಲೀಸ್ ಗಿರಿ ನಡೆಸಲಾಗುತ್ತದೆ,ಮುಸ್ಲೀಂ ಸಮುದಾಯದವರು ದೇವಸ್ಥಾನಗಳ ಬಳಿ ವ್ಯಾಪಾರ ಮಾಡುವಂತಿಲ್ಲ ಎಂದು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ,ಮಾತು ಎತ್ತಿದರೆ ದೇಶದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿ ದೇಶದಲ್ಲಿ ಮನುವಾದ ಜಾರಿಗೊಳಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ,ಆದರೆ ತೋರಿಕೆಗೆ ದೇಶಪ್ರೇಮದ ಹೇಳಿಕೆ ನೀಡುತ್ತಾರೆ,ಆದರೆ ದೇಶ ವಿರೋಧಿ ಕೆಲಸಗಳನ್ನೆ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಇದೇ ಕಾರಣ ದಿಂದ ನಮ್ಮ ಭಾರತ ಕಮ್ಯುನಿಸ್ಟ್ ಪಕ್ಷ ಈಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದು,ಲೋಕಸಭಾ ಚುನಾವಣೆಯಲ್ಲಿ ಜಿ.ಕುಮಾರ ನಾಯಕ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಬೆಂಬಲಿಸುವ ಮೂಲಕ ಅವರ ಗೆಲುವಿಗೆ ಶ್ರಮಿಸಲಿದೆ ಎಂದು ಘೋಷಿಸಿದರು.

ಇದೇ ಸಂದರ್ಭದಲ್ಲಿ ಎಐಟಿಯುಸಿ ಮುಖಂಡರಾದ ಕಲ್ಪನಾ ಗುರಸುಣಗಿ,ಅಹ್ಮದ್ ಪಠಾಣ್ ಮಾತನಾಡಿದರು,ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಜಾ ವಿಜಯಕುಮಾರ ನಾಯಕ,ರಾಜಾ ಸುಶಾಂತ ನಾಯಕ,ರಮೇಶ ದೊರೆ ಆಲ್ದಾಳ,ಮಲ್ಲಯ್ಯ ಕಮತಗಿ,ವೆಂಕಟೇಶ ಹೊಸ್ಮನಿ,ಬಸಮ್ಮ ತಡಬಿಡಿ,ಶ್ರೀದೇವಿ ಕೂಡ್ಲಿಗಿ,ಭೀಮಣ್ಣ ಕದರಾಪುರ ಸೇರಿದಂತೆ ಇತರರಿದ್ದರು ದಾವೂದ್ ಪಠಾಣ್ ನಿರೂಪಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago