ಕಲಬುರಗಿ: ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಮತದಾರರಲ್ಲಿ ಮನವಿ ಮಾಡಿದರು.
ಪುಟ್ ಪಾಕ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಅವರು ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಜನಸಾಮಾನ್ಯರು ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ ಎಂದ ಅವರು ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿಯವರು ದೇಶದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿ ಎಂದರು.
ಮಾಜಿ ಸಚಿವ ಬಾಬುರಾವ ಚಿಂಚನಸೂರು ಮಾತನಾಡಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ತಂದಿದ್ದಾರೆ. ಆರ್ಟಿಕಲ್ 371 ಜೆ ತಂದು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರದೇಶದಲ್ಲಿ ಅಭಿವೃದ್ದಿಗೂ ಶ್ರಮಿಸಿದ್ದಾರೆ. ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಚುನಾವಣೆಗೆ ನಿಂತಿದ್ದಾರೆ. ನೀವೆಲ್ಲ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.
ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಬಸರೆಡ್ಡಿ ಅನಪೂರ, ಮಾಜಿಎಂ ಎಲ್ ಸಿ ಶರಣಪ್ಪ ಮಟ್ಟೂರು, ಚಿದಾನಂದಪ್ಪ ಕಾಳಬೆಳಗುಂದಿ, ಶ್ರೇಣಿಕ್ ಕುಮಾರ ದೋಖಾ, ಶರಣಪ್ಪ ಮಾನೇಗಾರ್, ರವೀಂದ್ರರೆಡ್ಡಿ ಮಾಲೀಪಾಟೀಲ, ರಘುನಾಥರೆಡ್ಡಿ ನಜರಾಪುರ, ಬಸವರಾಜ ದಳಪತಿ, ಎಸ್ ಕೆ ಮೈನೂದ್ದೀನ್, ಚೆನ್ನಪ್ಪ ಗಾಜರಕೋಟ, ವೆಂಕಟೇಶ ಕರೆ, ದೇವರಾಜ್ ಹತ್ತಿಕುಣಿ, ಕೃಷ್ಣ ಚೆಪೆಟ್ಲಾ, ಸಿದ್ದಲಿಂಗರೆಡ್ಡಿ ಉಳ್ಳೆ ಸೂಗೂರು, ಸಂಜು ಚಂದಾಪುರ, ಅನಂದ್ ಬೋಯಿನ್ ಯದ್ಲಾಪುರ ಸೇರಿದಂತೆ ಹಲವರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…