ಶಹಾಪುರ: ಲೇಖಕ ಸಿದ್ಧರಾಮ ಹೊನ್ಕಲ್ ಅವರಿಗೆ ಮೈಸೂರಿನ ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಎ.ಹೇಮಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಈ ಜಂಟಿ ವೇದಿಕೆಗಳ ಅಡಿಯಲ್ಲಿ 7 ರಂದು ಮೈಸೂರಿನ ಐಡಿಯಲ್ ಜಾವಾ ರೋಟರಿ ಶಾಲಾ ಆವರಣ ನಡೆವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಂಟಿ ವೇದಿಕೆಗಳ ಲೇಖಕರಾದ ಎಂ.ಬಿ.ಸಂತೋಷ ಹಾಗೂ ಖ್ಯಾತ ಹಿರಿಯ ಲೇಖಕಿ ಎ.ಹೇಮಗಂಗಾ ಮೈಸೂರು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಂ.ಬಿ.ಸಂತೋಷ ಅವರ ನೂಪುರ ಹೈಕು ಕೃತಿ, ಲೇಖಕಿ ವಾಣಿ ರಾಘವೇಂದ್ರ ಅವರ ಡಾ.ಸ್ವೇತಾ ಇಂಗ್ಲಿಷ್ ಕಾದಂಬರಿ, ಮತ್ತು ಶೋಭಾ ಬಿ ಅವರ ಭಾವತರಂಗದ ಪಯಣ ಹೀಗೆ ಈ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಲು ಮೈಸೂರಿಗೆ ಅಹ್ವಾನಿತರಾಗಿರುವ ಲೇಖಕ ಸಿದ್ಧರಾಮ ಹೊನ್ಕಲ್ ರ ಒಟ್ಟು ಸಾಹಿತ್ಯ ಸಾಧನೆ ಹಿನ್ನೆಲೆಯಲ್ಲಿ ಅವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರ್ರಶಸ್ತಿ ನೀಡಿ ಗೌರವಿಸಲಿದ್ದೇವೆ ತಿಳಿಸಿದ್ದಾರೆ.
ಇದು ಸಾಂಸ್ಕೃತಿಕ ರಾಜಧಾನಿ ಹಳೆ ಮೈಸೂರು ಭಾಗದವರಿಂದ ಕಲ್ಯಾಣ ಕರ್ನಾಟಕಕ್ಕೆ ಸಂದ ಗೌರವ.ಇದು ವೈಯಕ್ತಿಕವಾಗಿ ತಮಗಷ್ಟೆ ಅಲ್ಲ ಎಂದು ಲೇಖಕ ಸಿದ್ಧರಾಮ ಹೊನ್ಕಲ್ ಅಭಿಪ್ರಾಯಪಟ್ಟಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…