ಕಲಬುರಗಿ: ಗುರುವಾರದಂದು ಹೈ.ಕ.ಶಿ. ಸಂಸ್ಥೆಯ, ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ, ರಾಷ್ಟೀಯ ಸೇವಾ ಯೋಜನೆ, ಭಾರತ ಸರ್ಕಾರದ, ಕ್ರೀಡಾ ಮತು ಯುವ ಸಬಲೀಕರಣ ಇಲಾಖೆ, ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಸಂಯುಕ್ತಾಶ್ರಯದಲ್ಲಿ ಶಹೀಧ್ ದಿವಸದ (ಬಲಿದಾನ ದಿವಸ) ಅಂಗವಾಗಿ “ಮತದಾನದ ಜಾಗೃತಿ, ಚುನಾವಣೆಯಲ್ಲಿ ಯುವಕರ ಪಾತ್ರ ಮತ್ತು ಸ್ವಚ್ಛತಾ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ವಿಜಯಕುಮಾರ ಗಾಣಿಗೆರ್, ಪ್ರಾಂಶುಪಾಲರು, ಡಾ. ಬಿ.ಆರ್. ಅಂಬ್ಡೇಕರ್ ಪದವಿ ಮಹಾವಿದ್ಯಾಲಯ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮತದಾನ ಮಾಡುವ ಪವಿತ್ರ ಕಾರ್ಯದಲ್ಲಿ ಎಲ್ಲರೂ ಮತ್ತು ವಿಶೇಷವಾಗಿ ಎಲ್ಲಾ ಯುವಕರು ಕಡ್ಡಾಯವಾಗಿ ಭಾಗವಹಿಸುವುದರ ಮುಖಾಂತರ ಸದೃಢವಾದ ದೇಶವನ್ನು ಕಟ್ಟುವುದರಲ್ಲಿ ಕೈ ಜೋಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜಶೇಖರ ವಿ. ಬೀರನಳ್ಳಿ ವಹಿಸಿ ವಿದ್ಯಾರ್ಥಿಗಳನ್ನು ಉದೇಶಿಸಿ ಮಾತನಾಡಿ ಪ್ರಜಾಪ್ರಭುತ್ವವದ ವ್ಯವಸ್ಥೆಯನ್ನು ಉಳಿಸುವಲ್ಲಿ ಯುವಕರ ಪಾತ್ರ ಬಹಳ ಪ್ರಮುಖವಾದದು. ಮತ್ತು ಇದರ ಅಳಿವು – ಉಳಿವು ಯುವಕರ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದ ಪ್ರಾಸ್ಥವಿಕ ನುಡಿಗಳು ಹಾಗೂ ಸ್ವಾಗತವನ್ನು ಡಾ. ಪ್ರಾಣೇಶ ಎಸ್. ರಾ.ಸೇ.ಯೋ. ಅಧಿಕಾರಿ ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ರೇಣುಕಾದೇವಿ ಪಾಟೀಲ ನಿರ್ವಹಿಸಿದರು. ವಂದನಾರ್ಪಣೆಯನ್ನು ಡಾ. ಶಂಕ್ರಪ್ಪ ಕೆ. ರಾ.ಸೆ.ಯೋ. ಅಧಿಕಾರಿ ʼಬʼ ಘಟಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…