ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಆಡಳಿತದಿಂದ ಅಭಿವೃದ್ಧಿ ಶೂನ್ಯ: ಸುನಿಲ್ ವಲ್ಯಾಪುರೆ

ವಾಡಿ : ಕಾಂಗ್ರೆಸ್ ಆಡಳಿತದಿಂದ ರಾಜ್ಯದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿ ವಿದ್ಯುತ್ ತೊಂದರೆಯಿಂದ ರಾಜ್ಯ ಕತ್ತಲೆಯಲ್ಲಿದ್ದು ಅಭಿವೃದ್ಧಿ ಶೂನ್ಯ ಸಾಧನೆ ಮಾಡಿದೆ ಎಂದು ವಿಧಾನ ಪರಿಷತ್ತಿನ ಉಪನಾಯಕ ಸುನಿಲ್ ವಲ್ಯಾಪುರೆ ದೂರಿದರು.

ವಾಡಿಯಲ್ಲಿ ಮಾರ್ಚ್ ಐದರಂದು ನಡೆದ ಮಹಾಶಕ್ತಿ ಕೇಂದ್ರದ ಬೂತ್‌ಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ಅಧಿಕಾರಕ್ಕೆ ಬಂದಂದಿನಿಂದ ಯಾವುದೇ ಪ್ರಗತಿ ಕಾರ್ಯಗಳು ನಡೆಯುತ್ತಿಲ್ಲ. ಕುಡಿಯಲು ನೀರಿಲ್ಲ. ಕೃಷಿಕರಿಗೆ ವಿದ್ಯುತ್ ಸಿಗುತ್ತಿ. ಹೀಗೆ ಇಲ್ಲಗಳ ಸಮಸ್ಯೆಯಿಂದ ರಾಜ್ಯ ಬಳಲುತ್ತಿದ್ದರೂ ಕಾಂಗ್ರೆಸ್ ಮಾತ್ರ ಬಿಜೆಪಿ ಮತ್ತು ಮೋದಿಯವರನ್ನು ಬಯ್ಯುವುದರಲ್ಲಿ ತಲ್ಲಿನವಾಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರಿಗೆ ವೈಯಕ್ತಿಕ ತೊಂದರೆ ಕೊಟ್ಟು ಮೊಕದ್ದಮೆಗಳನ್ನು ಹೂಡಿ ಜಾತಿ ಜಗಳವನ್ನು ಹಚ್ಚಿ ಸಂತೋಷಪಡುತ್ತಿದೆಎಂದು ಆರೋಪಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಸಂಸದರಾದ ಉಮೇಶ್ ಜಾಧವ್ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಶಹಾಬಾದ್ ಮತ್ತು ವಾಡಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದೆ.

ಬೆಂಗಳೂರಿಗೆ ಈಗಾಗಲೇ ಕಲಬುರ್ಗಿಯಿಂದ ಎರಡು ವಿಶೇಷ ರೈಲುಗಳ ಓಡಾಟ ಪ್ರಾರಂಭವಾಗಿದೆ ಜಲ್ ಜೀವನ್ ಮಿಷನ್ ಅಡಿಯಲ್ಲಿ ಚಿತ್ತಾಪುರ ತಾಲೂಕಿನಲ್ಲಿ ಮನೆಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಮಹಿಳೆಯರ ಆರೋಗ್ಯದ ರಕ್ಷಣೆಗಾಗಿ ಕಣ್ಣಿನ ಸುರಕ್ಷತೆಗಾಗಿ ಉಜ್ವಲ ಯೋಜನೆಯನ್ನು ಪ್ರಧಾನಮಂತ್ರಿಯವರು ಜಾರಿ ಮಾಡಿ ಅಭಿವೃದ್ಧಿಯಲ್ಲಿ ಮಹತ್ತರ ಬದಲಾವಣೆ ಮಾಡಲಾಗುತ್ತಿದೆ. ಆದರೆ ಚಿತಾಪುರದ ಕ್ಷೇತ್ರದ ಶಾಸಕರು ಮಾತ್ರ ಬಯ್ಯುವುದರಲ್ಲಿ ಮಗ್ನವಾಗಿದ್ದು ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡದೆ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಚಿತಾಪುರದಲ್ಲಿ ಬಿಜೆಪಿಗೆ ಕಾರ್ಯಕರ್ತರೇ ದೇವರ ಸ್ವರೂಪದಲ್ಲಿದ್ದು ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಲೋಕಸಭೆಗೆ ಜಾಧವ್ ರನ್ನು ಆಯ್ಕೆ ಮಾಡಿ ಕಳುಹಿಸಲಾಗುವುದು. ಇದಕ್ಕೆ ಎಲ್ಲರೂ ಆಶೀರ್ವಾದ ಮಾಡಬೇಕು ಎಂದು ವಿನಂತಿಸಿದರು.

ವಾಡಿಯಲ್ಲಿ ದೊಡ್ಡಮಟ್ಟದಲ್ಲಿ ಸೇವಾಲಾಲ್ ಜಯಂತಿ ಉತ್ಸವ ಆಚರಣೆಯಾಗುತ್ತಿದ್ದು ಎರಡನೇ ಬಾರಿಗೆ ಬಂಜಾರಾ ಸಮುದಾಯದ ಸರಳ ಸಜ್ಜನಿಕೆಯ ಜಾಧವ್ ಅವರನ್ನು ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿ ಅವಕಾಶ ಕಲ್ಪಿಸಿದೆ.

ರಾಷ್ಟ್ರದಲ್ಲಿ ಮತ್ತು ರಾಜ್ಯದಲ್ಲೇ ಇದು ಲಂಬಾಣಿಗರಿಗೆ ನೀಡಿದ ಏಕೈಕ ಕ್ಷೇತ್ರವಾಗಿದೆ. ಚಿತ್ರದುರ್ಗ ಮತ್ತು ವಿಜಯಪುರದಲ್ಲಿ ಮಾದಿಗ ಸಮುದಾಯದವರಿಗೆ ಅವಕಾಶ ನೀಡಿದ್ದು ಬಿಜೆಪಿಯಲ್ಲಿ ಮಾತ್ರ ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ನೀಡಲಾಗುತ್ತಿದೆ. ಕಾಂಗ್ರೆಸ್ ಯಾವುದೇ ಬಂಜಾರಾ ಸಮುದಾಯದವರಿಗೆ ಟಿಕೆಟ್ ನೀಡದೇ ಸಮುದಾಯವನ್ನು ಕಡೆಗಣಿಸಿದೆ ಎಂದು ಹೇಳಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago