ಕಲಬುರಗಿ: ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕಿ ಕೆ. ರಮ್ಯಾ ಅವರು ಭರವಸೆ ನೀಡಿದ್ದಾರೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ದ್ವಿತೀಯ ಪಿಯು ನಂತರ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರೀಲ್ 18 ಹಾಗೂ 19 ರಂದು ಪರೀಕ್ಷೆಗಳು ನಡೆಸಲಿದೆ. ಆದರೆ, ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡಾಗ ದೂರದ ಕಾರವಾರ, ಕೋಲಾರ ಹಾಗೂ ಧಾರವಾಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳು ನೀಡಿರುವುದು ಗೊತ್ತಾಗಿದೆ.
ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವಾಗಿ ಕಲಬುರಗಿ ಎಂದು ನಮೂದಿಸಿದ್ದರೂ ಕೂಡಾ ದೂರದ ಪರೀಕ್ಷಾ ಕೇಂದ್ರಗಳು ನಮೂದಾಗಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿತ್ತು.
ಈ ವಿಷಯ ತಿಳಿದ ಸಚಿವರು ರಮ್ಯಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಭ್ಯರ್ಥಿಗಳು ದೂರದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಆಗುವ ತೊಂದರೆಗಳನ್ನು ವಿವರಿಸಿ ಮನವರಿಕೆ ಮಾಡಿದರು. ಆಗ ಪ್ರತಿಕ್ರಿಯಿಸಿದ ರಮ್ಯಾ ಅವರು ಕಲಬುರಗಿ ಜಿಲ್ಲೆಯ ಅಭ್ಯರ್ಥಿಗಳನ್ನು ಕಲಬುರಗಿ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು ಎಂದು ಸಚಿವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…