ಶಹಾಬಾದ:ದೇಶದ ಆಹಾರ ಕೊರತೆ ನೀಗಿಸುವಲ್ಲಿ ರೈತರಿಗೆ ಹಸಿರು ಕ್ರಾಂತಿ ಮಂತ್ರ ಹೇಳಿಕೊಡುವ ಮೂಲಕ ದಲಿತ ಕುಟುಂಬದಲ್ಲಿ ಜನಿಸಿದ ಡಾ.ಬಾಬು ಜಗಜೀವನ ರಾಮ ದೇಶದ ಬಹು ದೊಡ್ಡ ಶಕ್ತಿಯಾಗಿದ್ದರು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ. ಗುರಲಿಂಗಪ್ಪ ಹೇಳಿದರು.
ಅವರು ಶುಕ್ರವಾರ ನಗರಸಭೆಯ ಕಾರ್ಯಾಲಯದಲ್ಲಿ ಆಯೋಜಿಸಲಾದ ಡಾ.ಬಾಬು ಜಗಜೀವನರಾಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಬಾಬು ಜಗಜೀವನ್‍ರಾಮ ಅವರು ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ. ಇಂತಹ ನಾಯಕರ ಜನ್ಮದಿನಾಚರಣೆ ನಡೆಸುವುದು ಸಾರ್ಥಕ ಎಂದು ಹೇಳಿದರು.
ಮಾದಿಗ ಸಮಾಜದ ಮುಖಂಡರಾದ ಕಿರಣ ಕೋರೆ ಹಾಗೂ ಡಿ.ಡಿ.ಓಣಿ ಮಾತನಾಡಿ, ಡಾ.ಬಾಬು ಜಗಜೀವನರಾಮ ಅವರು ರಕ್ಷಣಾ ಸಚಿವರಾದಾ ಅವಧಿಯಲ್ಲಿ ಮೊಟ್ಟ ಮೊದಲಿಗೆ ನಿವೃತ್ತ ಸೈನಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತಂದರು. ಅವರ ಆದರ್ಶ ಜೀವನ ಅಳವಡಿಸಿಕೊಳ್ಳಬೇಕೆಂದರು.
ಮಾದಿಗ ಸಮಾಜದ ತಾಲೂಕಾಧ್ಯಕ್ಷ ವಿಕ್ರಮ್ ಮೂಲಿಮನಿ, ಶಿವರಾಜ ಕೋರೆ,ಶರಣು ಪಗಲಾಪೂರ,ಶಂಕರ ಕುಸಾಳೆ, ರಾಜೇಶ ಯನಗುಂಟಿಕರ್,ಕೃಷ್ಣಪ್ಪ ಕರಣಿಕ್, ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ, ರಘುನಾಥ ನರಸಾಳೆ, ಜೆಇ ರಬ್ಬಾನಿ, ನಾರಾಯಣರೆಡ್ಡಿ, ಸಾಬಣ್ಣ ಸುಂಗಲಕರ್, ಪ್ರಾಣೇಶ ಕುಲಕರ್ಣಿ,ಪ್ರಮೋದ, ಮನೋಹರ್ ಮೇತ್ರಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…