ದೀನ ದಲಿತರು ಬಾಬೂಜಿಯವರ ಸಾಧನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ

0
8

ಕಲಬುರಗಿ: :ಭಾರತದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ಅವರ 117ನೇ ಜನ್ಮದಿನವನ್ನು ಅನನ್ಯ ಪದವಿ ಮತ್ತು ಸ್ನಾತ್ತಕೋತ್ತರ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.

ನಡೆದ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

Contact Your\'s Advertisement; 9902492681

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶರಣಪ್ಪ ಹೊನ್ನಗೆಜ್ಜೆ ಅವರು ಮಾತನಾಡಿ. ಡಾ.ಬಾಬು ಜಗಜೀವನರಾಮ ಅವರು ಈ ದೇಶಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ದಲಿತ ಕುಟುಂಬದಲ್ಲಿ ಜನಿಸಿ ಛಲದಿಂದ ಉನ್ನತ ವ್ಯಾಸಂಗ ಪೂರೈಸಿದರು. ಸ್ವಾತಂತ್ರ ಸಂಗ್ರಾಮದಲ್ಲಿ ಗಾಂಧೀಜಿ ಮತ್ತು ನೆಹರೂ ಅವರ ನಿಕಟವರ್ತಿಗಳಾಗಿ ದೇಶಕ್ಕೆ ಸ್ವಾತಂತ್ರ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅತ್ಯಂತ ಮೇಧಾವಿಯಾಗಿದ್ದ ಡಾ.ಬಾಬು ಜಗಜೀವನರಾಮ ಅವರು ದೀನ, ದಲಿತರು ಹಾಗೂ ಕಾರ್ಮಿಕ ವರ್ಗದವರ ಒಳಿತಿಗಾಗಿ ಹೋರಾಡಿದರು. ಸ್ವಾತಂತ್ರ್ಯಾ ನಂತರದ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸಿದೇಶದ ಮೊಟ್ಟಮೊದಲ ಉಪಪ್ರಧಾನಿ ಹುದ್ದೆಗೇರಿದ ಖ್ಯಾತಿ ಡಾ.ಬಾಬು ಜಗಜೀವನರಾಮ ಅವರಿಗೆ ಸಲ್ಲುತ್ತದೆ ಎಂದರು.

ದೇಶವು ತೀವ್ರ ಬರಗಾಲಕ್ಕೆ ತುತ್ತಾಗಿ ತುತ್ತು ಅನ್ನಕ್ಕೂ ಕೂಡ ಪರದಾಡುತ್ತಿದ ಸಂದರ್ಭದಲ್ಲಿ ಆಹಾರ ಖಾತೆ ಸಚಿವರಾಗಿ ಈ ದೇಶದಲ್ಲಿ ಹಸಿರುಕ್ರಾಂತಿಯನ್ನು ಮಾಡಿ ದೇಶವು ಆಹಾರದಲ್ಲಿ ಸ್ವಾವಲಂಬಿಯಾಗುವಂತೆ ಮಾಡಿದರು. ಅವರ ಜೀವನ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿದಾಯಕವಾಗಿದೆ. ದೀನ ದಲಿತರು ಬಾಬೂಜಿಯವರ ಸಾಧನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಅಧ್ಯಕ್ಷೆ ಸುಷ್ಮಾವತಿ ಹೊನ್ನಗೆಜ್ಜೆ, ಆಶಾರಾಣಿ ಕಲಕೋರಿ, ಅಕ್ಷತಾ ಪಾಟೀಲ, ರಾಜೇಶ್ವರಿ ಮಲಕ್ಕೂಡ, ಮಾಗರಾಜ ಹೊನ್ನಗೇಜ್ಜಿ, ಸುಜಾತಾ ದೇವನೂರಕರ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here