ಬಿಸಿ ಬಿಸಿ ಸುದ್ದಿ

ವಾಟ್ಸ್ಯಾಪ್ ಚಾನೆಲ್ ಸೇರಿದಂತೆ ಸಾಮಾಜಿಕ ಜಾಲತಾಣ‌ಗಳ ಮೇಲೆ ನಿಗಾ ವಹಿಸಲು ಸೂಚನೆ

  • ಎಂ.ಸಿ.ಎಂ.ಸಿ. ಸಮಿತಿ ಕಾರ್ಯ ಪರಿಶೀಲಿಸಿದ ಡಿ.ಸಿ.ಎಫ್ ಸುಮಿತ್ ಪಾಟೀಲ

ಕಲಬುರಗಿ; ಇತ್ತೀಚೆಗೆ ರಾಜಕೀಯ ನಾಯಕರು ಹೆಚ್ಚಾಗಿ ವಾಟ್ಸಾಪ್ ಚಾನೆಲ್‌ ಬಳಸುತ್ತಿರುವುದರಿಂದ ವಾಟ್ಸಾಪ್ ಚಾನೆಲ್‌ಗಳು ಸೇರಿದಂತೆ ಸಾಮಾಜಿಕ‌ ಜಾಲತಾಣಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಮೀಡಿಯಾ ಮಾನಿಟರಿಂಗ್ ಸೆಲ್‌ ಸಿಬ್ಬಂದಿಗೆ ಮಾಧ್ಯಮ‌ ಸಂಬಂಧಿತ ವಿಷಯಗಳ ಮೇಲ್ವಿಚಾರಣೆಯ ನೋಡಲ್ ಅಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಸೂಚನೆ ನೀಡಿದರು.

ಶನಿವಾರ ಕಲಬುರಗಿ ನಗರದ ವಾರ್ತಾ ಭವನದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಸೆಲ್‌ ಗೆ ಭೇಟಿ ನೀಡಿದ ಅವರು, ಇದಲ್ಲದೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಬರುವ ಕಾಸಿಗಾಗಿ ಸುದ್ದಿ ಪ್ರಸಾರ ಗೊಂಡಲ್ಲಿ ಕೂಡಲೆ ಎಂ.ಸಿ‌.ಎಂ.ಸಿ ಸಮಿತಿಗೆ, ಎಂ.ಸಿ.ಸಿ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಕಾನೂನು ಕ್ರಮಕ್ಕೆ ಸಹಾಯಕ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ದಿನದ 24 ಗಂಟೆ ಮುದ್ರಣ ಮಾಧ್ಯಮ, ಕೇಬಲ್ ಟಿ.ವಿ., ರಾಜಕೀಯ ಪಕ್ಷ, ನಾಯಕ,ಅಭ್ಯರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನು ವೀಕ್ಷಿಸಬೇಕು. ಎಫ್.ಎಂ. ರೇಡಿಯೋ ಮೇಲೂ ನಿಗಾ ವಹಿಸಬೇಕು ಎಂದರು. ಜಾಹೀರಾತು ಪ್ರಕಟಗೊಂಡಲ್ಲಿ ಅದನ್ನು ಆಯಾ ಪಕ್ಷ, ಅಭ್ಯರ್ಥಿಗಳ ಲೆಕ್ಕಕ್ಕೆ ಝರ್ಚು ಹಾಕಿ ಖರ್ಚು ವೆಚ್ಚ ಸಮಿತಿಗೆ ಮಾಹಿತಿ ನೀಡಬೇಕೆಂದು ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಮತ್ತು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಕಾರ್ಯದರ್ಶಿ ಸಿದ್ದೇಶ್ವರಪ್ರ ಜಿ.ಬಿ. ಅವರು ಸಮಿತಿ ಕಾರ್ಯನಿರ್ವಹಣೆ ಬಗ್ಗೆ ವಿವರಿಸಿದರು. ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago