ಬಿಸಿ ಬಿಸಿ ಸುದ್ದಿ

ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ

ಆಳಂದ: ನಾವು ಆರೋಗ್ಯ ಕಳೆದುಕೊಂಡು ಬೇರೆ ಏನೆಲ್ಲಾ ಸಂಪತ್ತಿದ್ದರು ವ್ಯರ್ಥ. ಪೌಷ್ಠಿಕಾಂಶಗಳುಳ್ಳ ಆಹಾರ ಸೇವನೆ, ಶುದ್ಧವಾದ ನೀರನ್ನು ಕುಡಿಯುವುದು, ದಿನಕ್ಕೆ 7-8 ಗಂಟೆಗಳ ಕಾಲ ಗಾಡ ನಿದ್ರೆ, ನಿಯಮಿತವಾಗಿ ವ್ಯಾಯಾಮ, ಯೋಗ ಮಾಡುವುದು, ಸಕಾರಾತ್ಮಕ ಚಿಂತನೆ ಸೇರಿದಂತೆ ಮುಂತಾದ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಎಲ್ಲರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಆಳಂದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಹಾಂತಪ್ಪ ಹಾಳಮಳಿ ಅಭಿಪ್ರಾಯಪಟ್ಟರು.

ಆಳಂದ ರಸ್ತೆಯ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ವಿಶ್ವ ಆರೋಗ್ಯ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರೋಗ ಬಂದು ಔಷಧಿ ಸೇವನೆ, ಆಸ್ಪತ್ರೆಗೆ ತೆರಳುವ ಸಂದರ್ಭಕ್ಕೆ ಅವಕಾಶ ಮಾಡಿಕೊಡಬೇಡಿ. ಮನೆಯಲ್ಲಿ ತಯಾರಿಸಿದ ತಾಜಾ, ಪೌಷ್ಠಕಾಂಶಗಳುಳ್ಳ ಆಹಾರ, ತರಕಾರಿ, ಹಣ್ಣುಗಳನ್ನು ಸೇವಿಸಿ. ಶುದ್ದವಾದ ನೀರನ್ನು ಯತೇಚ್ಛವಾಗಿ ಕುಡಿಯಿರಿ. ಎಣ್ಣೆಯಲ್ಲಿ ಕರಿದ, ಬೇಯಿಸಿದ ಆಹಾರ, ಧೂಮಪಾನ, ಮದ್ಯಪಾನ, ತಂಬಾಕು ಸೇವನೆ ಮಾಡಬೇಡಿ. ಅತಿಯಾದ ಮೋಬೈಲ್ ಬಳಕೆ, ಟಿ.ವಿ.ವೀಕ್ಷಣೆ ಬೇಡ ಎಂದು ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಕ.ರಾ.ಪ್ರಾ.ಶಾ.ಶಿ.ಸಂಘದ ಆಳಂದ ತಾಲೂಕಾ ಘಟಕದ ಅಧ್ಯಕ್ಷ ಹಾಗೂ ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ಪರಿಸರ ಮತ್ತು ಜೀವಿಗಳ ನಡುವೆ ಅನೋನ್ಯ ಹಾಗೂ ನೇರವಾದ ಸಂಬಂಧವಿದೆ. ಪರಿಸರದ ಮೇಲಿನ ಮಾನವನ ದಬ್ಬಾಳಿಕೆಯಿಂದ ಅದು ಅಸಮತೋಲನವಾಗಿ ವಿವಿಧ ರೀತಿಯ ಹೊಸ ರೋಗಗಳು ಹುಟ್ಟುತ್ತಿವೆ. ಈ ರೋಗಗಳು ಮಾನವ ಸೇರಿದಂತೆ ವಿವಿಧ ಜೀವಿಗಳ ಮೇಲೆ ನೇರವಾದ ದುಷ್ಟರಿಣಾಮ ಉಂಟುಮಾಡುತ್ತಿವೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಆರೋಗ್ಯ ಕಾಪಾಡುವುದರ ಜೊತೆಗೆ ಪರಿಸರವನ್ನು ಕಾಪಾಡಬೇಕಾದದ್ದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮಣಿಕಂಠ ಶಿವಪುರ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago