ಬಿಸಿ ಬಿಸಿ ಸುದ್ದಿ

ಅ. 06 : 10ನೇ ಚುಟುಕು ಸಾಹಿತ್ಯ ಸಮ್ಮೇಳನ

ಕೊಪ್ಪಳ : ನಗರದ ಸಾಹಿತ್ಯ ಭವನದಲ್ಲಿ ಅಕ್ಟೋಬರ್ 06 ರಂದು ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.

ಸಮ್ಮೇಳನದ ಅಧ್ಯಕ್ಷರಾಗಿ ಚುಟುಕು ಕವಿ, ಕಲಾವಿದ ಹಾಗೂ ಕುಕನೂರಿನ ರಮಾಬಾಯಿ ಅಂಬೇಡ್ಕರ್ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ಶಾಂತವೀರ ಬನ್ನಿಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪದವರಾದ ಶಾಂತವೀರ ಬನ್ನಿಕೊಪ್ಪ ಅವರು ‘ತುಂತುರು’ ಕವನ ಸಂಕಲನ ಹೊರತರುವುದರ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶ ಮಾಡಿದರು. ‘ಆಸರೆ’ ಹನಿಗವನ ಸಂಕಲನ, ‘ಕಲಾಸಿರಿ ಕವನಗಳ ಗರಿ’ ಕವನ ಸಂಕಲನವನ್ನು ಹೊರತಂದಿದ್ದಾರೆ. ತಾವೇ ಸ್ವತಃ ‘ಗವಿಗಂಗಾ ಪ್ರಕಾಶನ’ ವನ್ನು ಹುಟ್ಟು ಹಾಕಿ ಅದರ ಮೂಲಕ ತಮ್ಮ ವಿದ್ಯಾರ್ಥಿಗಳು ಬರೆದ ‘ಚಿಲಿಪಿಲಿ’, ‘ಮೌನ ಗೊಂಬೆಯ ಮಾತು’, ‘ಸಿಂಚನ’ ಹನಿಗವನ ಸಂಕಲನಗಳನ್ನು ಮುದ್ರಿಸಿಕೊಟ್ಟಿದ್ದಾರೆ. ಹಾಗೆಯೇ ಇದೇ ಪ್ರಕಾಶನದಿಂದ ‘ಹೊನಲಸಿರಿ’, ‘ಮೊದಲ ಹೆಜ್ಜೆ’, ‘ಸಂಚಲನ’ ಹೊರತಂದಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ನೀಡಿ ಗೌರವಿಸಿದೆ.

ಸಮ್ಮೇಳನದಲ್ಲಿ ಭಾಗವಹಿಸುವ ಕವಿಗಳು ಸೆಪ್ಟಂಬರ್ 25ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ತಮ್ಮ ಕವನಗಳನ್ನು ಕಳುಹಿಸಲು ಕೋರಲಾಗಿದೆ. ವಿಳಾಸ, ಹನುಮಂತಪ್ಪ ಅಂಡಗಿ ಚಿಲವಾಡಗಿ, ಅಧ್ಯಕ್ಷರು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಅಂಚೆ ಪೆಟ್ಟಿಗೆ ಸಂಖ್ಯೆ-30, ಕೊಪ್ಪಳ-583231. ಸನಿಹವಾಣಿ: 9008944290.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago