ಚಿಂಚೋಳಿ: ನಾಳೆ ಲೋಕಸಭೆ ಚುನಾವಣೆ ಪ್ರಯುಕ್ತ ಬೀದರ ಲೋಕಸಭಾ ವ್ಯಾಪ್ತಿಯ ಚಿಂಚೋಳಿ ಮತಕ್ಷೇತ್ರದ , ಚಿಂಚೋಳಿ ಮತ್ತು ಕಾಳಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರಾರಾದ ಶರಣು ಪಾಟೀಲ್ ಮೋತಕಪಳ್ಳಿ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಕಾಳಗಿ ಪಟ್ಟಣದ ಶ್ರೀ ಜಗದೇವ ಗುತ್ತೇದಾರ ರವರ ತೋಟದಮನೆಯಲ್ಲಿ ಹಾಗೂ ಮಧ್ಯಾನ್ಹ 01:00 ಗಂಟೆಗೆ ಚಿಂಚೋಳಿ ನಗರದ ಶ್ರೀ ಚನ್ನ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಭೆಗೆ lಕಾಂಗ್ರೆಸ್ ಮುಖಂಡರ ದಂಡು ಆಗಮಿಸುತ್ತಿದ್ದು ಕಾಂಗ್ರೆಸ್ ಪಕ್ಷದ ಬೀದರ ಲೋಕಸಭಾ ಅಭ್ಯರ್ಥಿಯಾದ ಸಾಗರ ಖಂಡ್ರೆ, ಪಂಚಾಯತ ರಾಜ್ ಹಾಗೂ ಐ.ಟಿ.ಬಿ.ಟಿ. ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಮುಲಸೌಕರ್ಯ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ್ ಖಂಡ್ರೆ, ಪೌರಾಡಳಿತ ಸಚಿವರಾದ ರಹೀಮ್ ಖಾನ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಜಯ್ ಸಿಂಗ್, ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಹಾಗೂ ಕಲಬುರಗಿ ಮತ್ತು ಬೀದರ ಜಿಲ್ಲೆಯ ಶಾಸಕರುಗಳು, ಮುಂಚೂಣಿಯ ನಾಯಕರು ಚುನಾಯಿತ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಿಂಚೋಳಿ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಸುಭಾಷ್ ರಾಠೋಡ್, ಬ್ಲಾಕ್ ಕಾಂಗ್ರೆಸ್ ಸಮಿತಿ ಚಿಂಚೋಳಿ ಅಧ್ಯಕ್ಷರಾದ ಬಸವರಾಜ ಮಲಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾಳಗಿ -ಕೊಡ್ಲಿ ಅಧ್ಯಕ್ಷರಾದ ದೇವೀಂದ್ರಪ್ಪ ಸಾಲಹಳ್ಳಿ ಮುಖಂಡತ್ವ ವಹಿಸುವರು.ಮತಕ್ಷೇತ್ರದ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…