ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಹಾರ ಜನಶಕ್ತ ಪಾರ್ಟಿಯಿಂದ ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ವಿಜಯಕುಮಾರ ಚಿಂಚನಸೂರಕರ್ ಅವರನ್ನು ಕಣಕ್ಕೆ ನಿಲ್ಲಿಸಲಾಗಿದೆ ಎಂದು ಪಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ ಎಸ್.ಚೌಧರಿ ತಿಳಿಸಿದರು.
ಪಕ್ಷದ ವತಿಯಿಂದ ಒಟ್ಟು ರಾಜ್ಯದ್ಯಂತ ಒಟ್ಟು 12 ಕ್ಷೇತ್ರಗಳಲ್ಲಿ ಪಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ನಿಲ್ಲಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಲೆಮಾರಿ ಅರೆ-ಅಲೆಮಾರಿ ಮತ್ತು ಎಲ್ಲ ಧರ್ಮದ ಜನರು ಹಿಂದು ಮುಸ್ಲಿಂ ಶಿಖ್ ರು, ಜೈನರು, ಬೌದ್ಧರು ಹಾಗು ಹಿಂದುಳಿದ ವರ್ಗದ ಜನರ ಬೆಂಬಲದೊಂದಿಗೆ ಲೋಕಸಭಾ ಚುನಾವಣೆ ಎದುರಿಸಲಿದ್ದೆವೆ ಎಂದು ಅವರು ಹೇಳಿದರು.
ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತವನ್ನು ಕಂಡ ಈ ನಾಡಿನ ಜನರು ಬೇಸತ್ತಿದ್ದಾರೆ. ಜನಪರ ಆಡಳಿತ ಮಾಡುವಂತಹ ಹಾಗೂ ಜನರ ತೆರಿಗೆ ಹಣ ಜನಗಳ ಅಭಿವೃದ್ಧಿಗೆ ಮೀಸಲಾಗಿಡುವ ಉದ್ದೇಶಕ್ಕಾಗಿ ಪ್ರಹಾರ ಜನಶಕ್ತಿ ಪಾರ್ಟಿ ಈ ಬಾರಿ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸಲಾಗಿದೆ. ಗೆದ್ದೇ ಗೆಲ್ಲತ್ತೇವೆ ಎನ್ನುವ ವಿಶ್ವಾಸಕೂಡ ಇದೆ ಎಂದು ಹೇಳಿದರು.
ಶೇಖರ ಸಿಂಗ್, ಶರಣಬಸವ ಹಿರೇಮಠ, ಗುಡುಸಾಬ ಮುತ್ತುವಲ್ಲಿ ಸಂತೋಷ ಸಿಂಧೆ, ಅಂತಿತಾ ಹೆಳವರ, ಜಗತ್ ಸಿಂಗ್, ಜಗದೀಶ ಗಾರಂಪಳ್ಳಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…