ಕಲಬುರಗಿ ಕಸಾಪ: ಭೀಮ ಯಾನ ಏ. 12 ರಿಂದ

0
129

ಕಲಬುರಗಿ: ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ಸಂವಿಧಾನ ಬರೆದು ದೇಶದ ಎಲ್ಲ ಜನಾಂಗದವರಿಗೆ ಸಮಾನ ಅವಕಾಶ ಕಲ್ಪಿಸಿಕೊಟ್ಟಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಹೊಸ ಪೀಳಿಗೆಗೆ ಮುಟ್ಟಿಸುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏಪ್ರೀಲ್ 12 ರಿಂದ ಜಿಲ್ಲೆಯಾದ್ಯಂತ ಭೀಮ ಯಾನ ಎಂಬ ವಿಶೇಷ ಚಳವಳಿ ರೂಪದ ಕಾರ್ಯಕ್ರಮವೊಂದನ್ನು ರೂಪಿಸಿದ್ದೇವೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಬಾಬಾಸಾಹೇಬರ ವೈಚಾರಿಕ ಚಿಂತನೆಗಳಿಂದ ಮಾತ್ರ ಸ್ವಾಸ್ಥ್ಯ ಸಮಾಜವನ್ನು ಕಟ್ಟಲು ಸಾಧ್ಯ ಎಂಬ ವಿಶ್ವಾಸದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.

Contact Your\'s Advertisement; 9902492681

ಏಪ್ರೀಲ್ 12 ರ ಬೆಳಗ್ಗೆ 11.15 ಕ್ಕೆ ನಗರದ ನಾಗನಳ್ಳಿ ರಿಂಗ್ ರಸ್ತೆಯಲ್ಲಿ ಆರ್ಯನ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಜರುಗಲಿರುವ ಭೀಮ ಯಾನ ಕ್ಕೆ ಕರ್ನಾಟಕ ಕೆಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ ಚಾಲನೆ ನೀಡಲಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಡಾ. ಗೋಲಪ್ಪ ರಾಜಾಪೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರು ಆಶಯ ನುಡಿಗಳನ್ನಾಡಲಿದ್ದು, ಸಮಕಾಲೀನ ಭಾರತದಲ್ಲಿ ಡಾ. ಅಂಬೇಡ್ಕರ್ ಚಿಂತನೆಗಳು ಕುರಿತು ಸಾಹಿತಿ ಜಗನ್ನಾಥ ಎಲ್ ತರನಳ್ಳಿ, ಡಾ. ಅಂಬೇಡ್ಕರ್ ದೃಷ್ಟಿಯಲ್ಲಿ ಸಾಮಾಜಿಕ ನ್ಯಾಯದ ಕುರಿತು ಸಂಸ್ಕೃತಿ ಚಿಂತಕ ವಿಠ್ಠಲ್ ವಗ್ಗನ್, ಡಾ. ಅಂಬೇಡ್ಕರ್ ಮತ್ತು ಮಹಿಳಾ ಸಬಲೀಕರಣದ ಕುರಿತು ಪ್ರಾಧ್ಯಾಪಕಿ ಡಾ. ಸಾರಿಕಾದೇವಿ ಕಾಳಗಿ ಅವರು ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ್ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತ್ತಲು ಆವರಿಸಿರುವ ಇಂದಿನ ಸಮಾಜವನ್ನು ಸಮಾನತೆ, ಭಾವೈಕ್ಯತೆ ಮತ್ತು ಸಮೃದ್ಧಿಯ ಬೆಳಕಿನೆಡೆಗೆ ಕೊಂಡೊಯ್ಯುವ ಪ್ರಯತ್ನ ಈ ಕಾರ್ಯಕ್ರಮದ್ದಾಗಿದೆ. ಸಾಹಿತ್ಯಿಕ ಚಟುವಟಿಕೆಗಳ ಜತೆಗೆ ಸಮ ಸಮಾಜ ನಿರ್ಮಾಣದ ಕನಸು ಕಂಡಿರುವ ಮಹಾತ್ಮರ ಚಿಂತನೆಗಳು ಇಂದಿನ ಸಮಾಜಕ್ಕೆ ತಲುಪಿಸುವ ಪ್ರಯತ್ನ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಲಿದೆ.-ವಿಜಯಕುಮಾರ ಪಾಟೀಲ ತೇಗಲತಿಪ್ಪಿ

*ಕಸಾಪ ಜಿಲ್ಲಾಧ್ಯಕ್ಷ*

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here