ಕಲಬುರಗಿ: ಬುಧವಾರ ಬೆಂಗಳೂರಿನ ಮಲ್ಲೇಶ್ವರಂನ ಜಗನ್ನಾಥ ಭವನದ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರಾದ ವಿಜೆಯಂದ್ರ ಅವರ ಸಮ್ಮುಖದಲ್ಲಿ ಅಫಜಲಪುರ ಮತಕ್ಷೇತ್ರದ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಬಿಜೆಪಿ ಸೇರ್ಪಡೆ ಯಾಗಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತನ್ನ ಹಿರಿಯ ಸಹೋದರಾದ ಮಲ್ಲಿಕಯ್ಯ ಗುತ್ತೇದಾರ ಅವರ ಭಿನ್ನ ಮತದ ಕಾರಣ ಸಹೋದರನ ವಿರುದ್ಧವೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿದ್ದರು. ಇತ್ತೀಚೆಗಷ್ಟೇ ನಿತಿನ್ ಗುತ್ತೇದಾರಗೆ ಬಿಜೆಪಿ ಸೇರಿಸಿಕೊಳ್ಳಬಾರದೆಂದು ಮಾಲಿಕಯ್ಯ ಬೆಂಬಲಿಗರು ಪಕ್ಷದ ವರಿಷ್ಠರಿಗೆ ಆಗ್ರಹಿಸಿದರು.
ನಿತಿನ್ ಗುತ್ತೇದಾರ ಅವರಿಗೆ ಪಕ್ಷಕ್ಕೆ ಸೇರಿಸಿಕೊಂಡಿರುವುದರಿಂದ ಅಫಜಲಪುರ ಕ್ಷೇತ್ರದ ರಾಜಕೀಯ ವಲಯದಲ್ಲಿ ಸಂಚಲನ ಚುರುಕುಗೊಂಡಿದೆ.
ಈ ಸಂದರ್ಭದಲ್ಲಿ ಸಿಟಿ ರವಿ, ಅರಾಗ ಜ್ಞಾನೇಂದ್ರ, ಕಲಬುರಗಿ ಬಿಜೆಪಿ ಪಕ್ಷದ ನಗರ ಅಧ್ಯಕ್ಷ ಚಂದು ಪಾಟೀಲ್, ಶಿವರಾಜ್ ಪಾಟೀಲ್ ರದ್ದೇವಾಡಿ ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…