ನಾಮಪತ್ರ ಸಲ್ಲಿಕೆ ಹಿನ್ನೆಲೆ, ಡಿ.ಸಿ. ಕಚೇರಿ ಸುತ್ತ ಅನಗತ್ಯ ಓಡಾಟ ನಿಷೇಧ

0
28

ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್‌.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಏಪ್ರಿಲ್ 12 ರಿಂದ 19ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಭ್ಯರ್ಥಿಗಳು ನಾಮಪತ್ರ‌ ಸಲ್ಲಿಸಬಹುದಾಗಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ‌ ನಡೆಯಲಿದ್ದು, ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ವಿನಾಕಾರಣ ಡಿ.ಸಿ. ಕಚೇರಿ ಸುತ್ತ ಓಡಾಟ ಮಾಡಬಾರದು ಮತ್ತು ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಸರಕಾರಿ ಕಚೇರಿಯಲ್ಲಿ ಅಗತ್ಯ ಕೆಲಸವಿದ್ದರೆ ಮಾತ್ರ ಬೆಳಿಗ್ಗೆ 11 ಗಂಟೆಗಿಂತ ಮುಂಚೆ ಮತ್ತು ಮಧ್ಯಾಹ್ನ 3 ಗಂಟೆಯ ನಂತರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಯಾವುದೇ ವ್ಯಕ್ತಿಯು ಅನುಮಾನಾಸ್ಪದವಾಗಿ ಓಡಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿರುವ ಡಿ.ಸಿ ಅವರು, ಸಾರ್ವಜನಿಕರು ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here