ಆಳಂದ; ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಪ್ರೇಮಿಳಾಬಾಯಿ ಮಾಧವರಾವ ಗುತ್ತೇದಾರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕನ್ಯಾ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಪ್ರಾಪ್ತವಾಗಿದೆ.
ಪರೀಕ್ಷೆಗೆ ಕುಳಿತ ಕಾಲೇಜಿನ 86 ವಿದ್ಯಾರ್ಥಿನಿಯರಲ್ಲಿ 17 ವಿದ್ಯಾರ್ಥಿನಿಯರು ಅಗ್ರ ಶ್ರೇಣಿಯಲ್ಲಿ, 56 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿನಿಯರು ದ್ವೀತಿಯ ಶ್ರೇಣಿಯಲ್ಲಿ, 3 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಕಾಲೇಜಿಗೆ ಪ್ರತಿಶತ 95.35 ಫಲಿತಾಂಶ ಲಭ್ಯವಾಗಿದೆ. ಕಾಲೇಜಿನ ಧಾನಮ್ಮಾ ಶೇ. 93.66%, ಭಾಗ್ಯಲಕ್ಷ್ಮೀ ಶೇ. 93%, ರಾಧಿಕಾ ಶೇ. 92.33%, ಆಶಾರಾಣಿ ಶೇ. 92%, ಸಂಗೀತಾ ಶೇ. 90%, ಲಕ್ಷ್ಮೀ, ಶೇ. 90, ಪ್ರಿಯಾಂಕಾ ಶೇ. 90%, ಪೂಜಾ ಶೇ. 88.16% ಅಂಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರೂ ಹಾಗೂ ಮಾಜಿ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿಗಳೂ ಹಾಗೂ ಜಿ.ಪಂ ಮಾಜಿ ಉಪಾಧ್ಯಕ್ಷರಾದ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಪ್ರಾಚಾರ್ಯ ಮಲ್ಲಿಕಾರ್ಜುನ ಬುಕ್ಕೆ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…