ಅಫಜಲಪೂರ: ಗೊಬ್ಬುರ್ ಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾವನೂರ್ ಉಪ ಕೇಂದ್ರದಲ್ಲಿ ಇಂದು ಪೋಷಣ ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಮಹತ್ವವನ್ನು ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಅವರು ಮಾತನಾಡಿದರು ತದನಂತರ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ಮಾಡಲಾಯಿತು ಹಾಗೂ ಗರ್ಭಿಣಿ ತಾಯಿಂದಿರಿಗೆ ಶ್ರೀಮಂತ ಕಾರ್ಯಕ್ರಮ ಮಾಡಲಾಯಿತು .
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮುಖಂಡರು ಅಂಗನವಾಡಿ ಮೇಲ್ವಿಚಾರಕರು ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು , ಇಲಾಖೆ ಕಿರಿಯ ಆರೋಗ್ಯ ಸಹಾಯಕ ಮಹಿಳೆ ಪುರುಷ ಹಾಜರಿದ್ದರು