ಬಿಸಿ ಬಿಸಿ ಸುದ್ದಿ

ದಮನಿತರ ಧ್ವನಿ ಡಾ. ಬಿ ಆರ್ ಅಂಬೇಡ್ಕರ್

ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ.

ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ದಿನದಂದು, ಅವರ ಜೀವನ ಮತ್ತು ಕೆಲಸವನ್ನು ಗೌರವಿಸಲು ಸ್ಮರಣಾರ್ಥ ಕಾರ್ಯಕ್ರಮಗಳನ್ನು ರಾಷ್ಟ್ರವ್ಯಾಪಿ ನಡೆಸಲಾಗುತ್ತದೆ.

ಅಷ್ಟೇ ಅಲ್ಲದೆ ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್.

ಅಂಬೇಡ್ಕರ್ ಅವರ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ: ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು.

ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.

1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ತಮ್ಮ ಜೀವನದಲ್ಲಿ ಮುಖ್ಯವಾಗಿ ಹೋರಾಟ ನಡೆಸಿದ್ದು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು ‘ಮೂಕನಾಯಕ’ ಎಂಬ ಪತ್ರಿಕೆಯನ್ನು ಆರಂಭಿಸಿದರು.

ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ.

ಅಂಬೇಡ್ಕರ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. “ಹಿಂದೂ ರಾಜ್ ಸತ್ಯವಾದರೆ, ಅದು ಈ ದೇಶಕ್ಕೆ ದೊಡ್ಡ ವಿಪತ್ತಾಗುವುದರಲ್ಲಿ ಸಂದೇಹವಿಲ್ಲ” ಎಂದು ಹೇಳಿದ್ದರು.

ಅವರು ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಭಾರತ ಸರ್ಕಾರ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.ಡಾ. ಬಿ ಆರ್ ಅಂಬೇಡ್ಕರ್ ಅವರನ್ನ ಯಾವುದೇ ಒಂದು ವರ್ಗಕ್ಕೆ ಸೀಮಿತ ಮಾಡದೆ ಅವರಲೊಬ್ಬ ದಾರ್ಶನಿಕ ಅರ್ಥಶಾಸ್ತ್ರಜ್ನರನ್ನ ನಾವು ಕಾಣಬೇಕಿದೆ.

ಕಾಶಿಬಾಯಿ. ಸಿ. ಗುತ್ತೇದಾರ
ಮಾಧ್ಯಮ ಕ್ಷೇತ್ರದ ಯುವ ಬರಹಗಾರರು

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

46 mins ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

7 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

8 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

19 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

19 hours ago