ಚಿತ್ತಾಪುರ; ಭಾರತೀಯ ಜನತಾ ಪಕ್ಷದ ಚಿತ್ತಾಪುರ ಮಂಡಲದ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ರಾಜು ದೊರೆ ತಿಳಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿನ ಕೆಲ ಬೆಳವಣಿಗೆಗಳ ಬಗ್ಗೆ ಮನನೊಂದು ರಾಜೀನಾಮೆ ಪತ್ರವನ್ನು ಮಂಡಲ ಅಧ್ಯಕ್ಷರಿಗೆ ಸಲ್ಲಿಸಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.