ಕಲಬುರಗಿ: ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ ಆದರ್ಶಗಳು ಸದಾ ಕಾಲ ಪ್ರಸ್ತುತವಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದಮನಿತರಿಗೆ ಶಿಕ್ಷಣದ ಮೂಲಕ ಜಾಗೃತಿ ಮೂಡಿಸಿ ಅದರ ಮಹತ್ವವನ್ನು ತಿಳಿಸಿಕೊಟ್ಟ ಜಗತ್ತಿನ ಏಕೈಕ ಹೋರಾಟಗಾರ-ಚಿಂತಕ ಡಾ. ಅಂಬೇಡ್ಕರ್ ರು ಪ್ರಮುಖರು. ಮಹಿಳೆಯರಿಗೆ ಸಮಾನ ಅವಕಾಶಗಳು ನಮ್ಮ ಸಂವಿಧಾನದ ಮೂಲಕ ಕಲ್ಪಿಸಿ ಸಮ ಸಮಾಜ ನಿರ್ಮಾತೃಗಳಾಗಿದ್ದರು. ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತೆ ಮೌಲ್ಯಗಳೊಂದಿಗೆ ಮಾದರಿ ಸಂವಿಧಾನ ಕೊಟ್ಟಿದ್ದಾರೆ. ಎಲ್ಲಾ ಜಾತಿ-ಧರ್ಮದವರು ಡಾ. ಅಂಬೇಡ್ಕರ್ ರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಡಿ ಬಡಿಗೇರ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಎಸ್ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ರಂಗನಟ ವಿಶ್ವರಾಜ್ ಪಾಟೀಲ, ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಮಾಲಾ ಕಣ್ಣಿ, ಸಂತೋಷ ಕುಡಳ್ಳಿ, ಸುರೇಶ ಲೇಂಗಟಿ, ಮಂಜುನಾಥ ಕಂಬಾಳಿಮಠ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ಮಲ್ಲಿನಾಥ ಸಂಗಶೆಟ್ಟಿ, ಹಣಮಂತರಪ್ರಭು, ರೇವಣಸಿದ್ದಪ್ಪ ಜೀವಣಗಿ, ಎಚ್ ಎಸ ಬರಗಾಲಿ, ವಿಶ್ವನಾಥ ತೊಟ್ನಲ್ಳಿ, ವಿನೋದಕುಮಾರ ಜೇನವೇರಿ, ಶಿವಲಿಂಗಪ್ಪ ಅಷ್ಟಗಿ, ಚನ್ನಮಲ್ಲಯ್ಯ ಹಿರೇಮಠ, ಎಸ್ ಕೆ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…