ಕಲಬುರಗಿ ನೂತನ ಉಸ್ತುವಾರಿ ಸಚಿವ ಗೋವಿಂದ ಕಾರ್ಜೋಳ ಶುಭ ಕೋರಿ ಖರ್ಗೆ ಟ್ವೀಟ್

0
98

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಉಸ್ತುವಾರಿ ಸಚಿವರನ್ನಾಗಿ ಗೋವಿಂದ ಕಾರ್ಜೋಳ ಅವರಿಗೆ ನೇಮಿಸಲಾಗಿದ್ದು, ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರ್ಜೋಳ ಅವರಿಗೆ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

Contact Your\'s Advertisement; 9902492681

ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಅವರಿಗೆ ಹೃತ್ಪೂರ್ವಕ ಶುಭಾಶಯ ಕೋರುತ್ತೇನೆ. ಅವರೊಬ್ಬ ಈ ಕಾಲಮಾನದ ಹಿರಿಯ ರಾಜಕಾರಣಿ ಅವರ ಅನುಭವ ಜಿಲ್ಲೆಯ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಜಿಲ್ಲೆಯ ಅಭಿವೃದ್ದಿಗಾಗಿ ಎಲ್ಲ ಶಾಸಕರು ಅವರನ್ನು ಬೆಂಬಲಿಸಲಿದ್ದಾರೆ. ಕಲಬುರಗಿ ಜಿಲ್ಲೆಯನ್ನು ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದ್ದರೂ ಕೂಡಾ ಅವರು  ಜಿಲ್ಲೆಗೆ ಹೆಚ್ಚಿನ ಸಮಯ ನೀಡಲಿದ್ದಾರೆ ಎಂದು ಭಾವಿಸುತ್ತೇನೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here