ಕಲಬುರಗಿ: ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಅನ್ನಪೂರ್ಣೇಶ್ವರಿ ಎಂದೇ ಗೌರವಿಸಲ್ಪಡುತ್ತಿದ್ದ,ಪ್ರಸ್ತುತ ಮಠದ ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ತಾಯಿಯವರಾದ ಲಿಂ.ಗೌರಮ್ಮ ಆಯಿಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಇದೇ 16 ರಂದು ಶ್ರೀಮಠದಲ್ಲಿ ಅತ್ಯಂತ ನಡೆಯಲಿದೆ.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀಮಠದ ಸುವರ್ಣ ಭವನದಲ್ಲಿ ಬೀದರ್ ಜಿಲ್ಲೆ ಹಾರಕೂಡ ಪೂಜ್ಯಶ್ರೀ ಡಾ ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ ,
ಪುಣ್ಯಸ್ಮರಣೋತ್ಸವ ಪ್ರಯುಕ್ತ ಪ್ರತಿವರ್ಷ ನಾಡಿನ ಸಾಧಕ ಮಾತೆಯರಿಗೆ ಶ್ರೀಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಮಾತೋಶ್ರೀ” ಪ್ರಶಸ್ತಿ ಯನ್ನು ಕಲಬುರಗಿ ಶ್ರೀ ಶರಣಬಸವೇಶ್ವರರ ಮಹಾಸಂಸ್ಥಾನದ ಡಾ.ದ್ರಾಕ್ಷಾಯಣಿ ಡಾ.ಶರಣಬಸಪ್ಪ ಅಪ್ಪಾ ಅವರಿಗೆ ಪ್ರದಾನ ಮಾಡಲಾಗುವುದು.
ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀಮಠದ ಆವರಣದಲ್ಲಿ ಮಧ್ಯಾಹ್ನ ಉಚಿತ ಆರೋಗ್ಯ ತಪಾಸಣೆ,ನೇತ್ರಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಕಾರ್ಯಕ್ರಮ ನಡೆಯಲಿದೆ.
ಸಂಜೆ ಮಾತೆಯವರ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಲಿದ್ದು ರಾತ್ರಿ 8 ಗಂಟೆಗೆ ಶ್ರೀ ಸಿದ್ಧತೋಟೇಂದ್ರ ಸುವರ್ಣ ಭವನದಲ್ಲಿ ಸ್ಮರಣೋತ್ಸವ ಸಮಾರಂಭ ನಡೆಯಲಿದೆ,ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ
ಸಮಾರಂಭದಲ್ಲಿ ಮಹಿಳಾ ಸಬಲೀಕರಣದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು,ಅನೇಕ ಮಹಿಳಾ ಸಾಧಕರನ್ನು ಗೌರವಿಸಲಾಗುವುದು. ಪ್ರಸಿದ್ಧ ಗಾಯಕರಿಂದ ಅಹೋರಾತ್ರಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.ಪುಣ್ಯಸ್ಮರಣೋತ್ಸವಕ್ಕೆ ಆಗಮಿಸುವ ಸದ್ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.
ಲಿಂ.ಗೌರಮ್ಮ ತಾಯಿಯವರು ನಾಲವಾರ ಶ್ರೀಮಠದ ಅನ್ನಪೂರ್ಣೇಶ್ವರಿ ಎಂದೇ ಬರುವ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು. ಶ್ರೀಮಠಕ್ಕೆ ಆಗಮಿಸುತ್ತಿದ್ದ ಸಾವಿರಾರು ಜನ ಭಕ್ತರಿಗೆ ಪ್ರೀತಿಯಿಂದ ಉಪಚರಿಸಿ ದಾಸೋಹದ ವ್ಯವಸ್ಥೆ ಮಾಡುತ್ತಿದ್ದ ಗೌರಮ್ಮ ತಾಯಿಯವರು ದಾಸೋಹದಲ್ಲಿಯೇ ಶಿವನನ್ನು ಕಂಡವರು.
ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ನಾಡಿನ ಮಾತೆಯರನ್ನು ಗೌರವಿಸುವ ಸಮಾರಂಭವನ್ನಾಗಿ ಆಚರಿಸುತ್ತಿದ್ದು,ಎಲ್ಲಾ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…