ಬಿಸಿ ಬಿಸಿ ಸುದ್ದಿ

ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ವಕೀಲರ ಮೇಲೆ ನಡೆಯುವ ಹಲ್ಲೆ ತಡೆಯುವ ಉದ್ದೇಶದಿಂದ ಹಾಗೂ ಆರೋಪಿಗಳಿಗೆ ಕಾನೂನು ಮೂಲಕ ಶಿಕ್ಷೆ ನೀಡುವ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ನಗರದ ಜಿಲ್ಲಾ ವಕೀಲರ ಸಂಘದ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು.

ಕಲಬುರಗಿ ಜಿಲ್ಲಾ ನ್ಯಾಯಾಲಯ, ವಕೀಲರ ಸಂಘದ ಕಟ್ಟಡ, ಕೆಎಟಿ, ಹೈಕೋರ್ಟ್, ಜಯದೇವ, ಕಿದ್ವಾಯಿ, ಟ್ರಾಮಾ ಕೇರ್ ಸೆಂಟರ್, ಕೇಂದ್ರಿಯ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ಗಮನಾರ್ಹ ಯೋಜನೆಗಳು ಖರ್ಗೆ ಸಾಹೇಬರು ಹಾಗೂ ಪಕ್ಷ ಅಧಿಕಾರದಲ್ಲಿ ಇದ್ದಾಗ ಜಾರಿಗೆ ಬಂದಿವೆ ಇದಕ್ಕೆಲ್ಲಾ ಕಾರಣ ನಿಮ್ಮೆಲ್ಲರ ಮತದಾನದ ಆಶೀರ್ವಾದ ಎಂದರು.

ಕಳೆದ‌ ಹತ್ತು ವರ್ಷದಲ್ಲಿ 30,000 ಕಾಮಗಾರಿಗಳು 8,000 ಮೆಡಿಕಲ್, 22,219 ಇಂಜಿನಿಯರಿಂಗ್, 5,500 ಫಾರ್ಮಸಿ, 3,448 ಐ ಎಚ್ ಆರ್ ಸಿ ಸೀಟುಗಳು ಪಡೆದುಕೊಳ್ಳಲಾಗಿದೆ ಹಾಗೂ 1,19,419 ನೇರ ನೇಮಕಾತಿ ಮಾಡಲಾಗಿದೆ. ಇದೆಲ್ಲ ಸಾಧ್ಯವಾಗಿದ್ದು ಆರ್ಟಿಕಲ್ 371 J ಅಡಿಯಲ್ಲಿ ಎಂದು ಖರ್ಗೆ ಹೇಳಿದರು.

ಮುಂದಿನ ಐದು ವರ್ಷದಲ್ಲಿ ಕಲಬುರಗಿಯ ಚಿತ್ರಣವನ್ನೇ ನಾವು ಬದಲಾಯಿಸಲಿದ್ದೇವೆ. ಇದಕ್ಕೆ ತಕ್ಕಂತೆ ರಾಧಾಕೃಷ್ಣ ಅವರು ಈಗಾಗಲೇ ನೀಲಿ ನಕ್ಷೆ ತಯಾರಿಸಿದ್ದಾರೆ.‌ ಹಾಗಾಗಿ, ಕಲಬುರಗಿಯ ಅಭಿವೃದ್ದಿ ನೀವೆಲ್ಲ ಸಹಕರಿಸಿ, ಯುವಕರ ಭವಿಷ್ಯ ನಿರ್ಮಿಸುವ ನಮ್ಮ ಕೆಲಸಕ್ಕೆ ನಿಮ್ಮೆಲ್ಲ ಮತ ಹಾಕುವ ಮೂಲಕ ನಮ್ಮೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಸಚಿವರಾದ ಶರಣಪ್ರಕಾಶ ಪಾಟೀಲ ಮಾತನಾಡಿ ಮತದ ಮೌಲ್ಯ ವಕೀಲರಿಗೆ ಸರಿಯಾಗಿದೆ ತಿಳಿದಿದೆ. ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಸೋಲಾಯಿತು. ಅದು ಅವರ ವೈಯಕ್ತಿಕ ಸೋಲಲ್ಲ ಅದು ಕಲಬುರಗಿಯ ಸೋಲು. ಕಲಬುರಗಿ ಬಾರ್ ಅಸೋಸಿಯೇಷನ್ ಸದಸ್ಯರಾದ ಖರ್ಗೆ ಸಾಹೇಬರು ಆರ್ಟಿಕಲ್ 371 J ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳನ್ನು ಜಿಲ್ಲೆಗೆ ತಂದಿದ್ದರು. ಈಗ ಅವರ ಮಾರ್ಗದರ್ಶನದಲ್ಲಿ ಅಭ್ಯರ್ಥಿ ರಾಧಾಕೃಷ್ಣ ಅವರು ಚುನಾವಣೆಗೆ ನಿಂತಿದ್ದಾರೆ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಶಾಸಕರಾದ ಅಲ್ಲಂ ಪ್ರಭು ಪಾಟೀಲ, ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಪಾಟೀಲ ಸೇರಿದಂತೆ ಹಿರಿಯ, ಕಿರಿಯ ಹಾಗೂ ಮಹಿಳಾ ವಕೀಲರು ಇದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

31 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago