ಕಾಂಗ್ರೆಸ್ ಬೆಂಬಲಿಸಲು ದ.ಸಂ.ಸ ತೀರ್ಮಾನ: ಮರಿಯಪ್ಪ ಹಳ್ಳಿ

0
31
  • ಇಮೀಡಿಯಾ ನ್ಯೂಸ್

ಕಲಬುರಗಿ: ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಮಬಲಿಸುವುದಾಗಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ರಾಜಕೀಯ ಜನಜಾಗೃತಿಯ ದಸಂಸ ಆಂದೋಲನ
ಪೋಸ್ಟರ್ ಬಿಡುಗಡೆ ಮಾಡಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಚುನಾವಣೆ ಇದಾಗಿದ್ದು, ಬಿಜೆಪಿಯ ಕೋಮುವಾದಿ ರಾಜಕೀಯಕ್ಕೆ ಜನತೆ ಬೇಸತ್ತಿದ್ದಾರೆ ಎಂದು ಹೇಳಿದರು.

Contact Your\'s Advertisement; 9902492681

ಪ್ರಧಾನಿ ಮೋದಿ ಅವರು ಕಳೆದ 10 ವರ್ಷಗಳಿಂದ ಹುಸಿ ಭರವಸೆ ನೀಡುತ್ತಿದ್ದು, ಜನ ಕಲ್ಯಾಣದ ಯಾವ ಕೆಲಸಗಳನ್ನು ಬಿಜೆಪಿ ಸರ್ಕಾರ ಮಾಡಿಲ್ಲ. ಹೀಗಾಗಿ ಜನತೆ ಮೋದಿ ಆಡಳಿತದಿಂದ ಭ್ರಮನಿರಸನಗೊಂಡಿದ್ದಾರೆ ಎಂದು ವಿವರಿಸಿದರು.

ಸಂವಿಧಾನ ಬದಲಾಯಿಸಲು ಹೊರಟಿರುವ ಆರ್.ಎಸ್.ಎಸ್. ಬಿಜೆಪಿಗರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ದೇಶದ ದುಡಿವ ಜನ, ದಮನಿತ, ಶೋಷಿತ ಸಮುದಾಯ, ಅಲ್ಪಸಂಖ್ಯಾತರು, ಪ್ರಜ್ಞಾವಂತರು ಒಂದಾಗಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ಬಿಜೆಪಿ ಹಾಗೂ ಸಂಘ ಪರಿವಾರದ ಷಡ್ಯಂತ್ರಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದರು.

ಹೀಗಾಗಿ ಕಲಬುರಗಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯವರ ಕೈ ಬಲಪಡಿಸಲು ಕ್ಷೇತ್ರದಾದ್ಯಂತ ಅರಿವು ಮೂಡಿಸಲಗುವುದು ಎಂದು ಅವರು ತಿಳಿಸಿದರು.

ಮಹಾದೇವ ಕೋಳಕೂರ, ಶಿವಶರಣಪ್ಪ ಕುರನಳ್ಳಿ, ಮಲ್ಲಿಕಾರ್ಜುನ ಗೌಡ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here