ಬಿಸಿ ಬಿಸಿ ಸುದ್ದಿ

ಶ್ರೀ ರಾಮನನ್ನು ವಿರೋಧಿಸಿದ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ: ಸಂಸದ ಡಾ. ಉಮೇಶ್ ಜಾಧವ್

ವಾಡಿ: ಶ್ರೀರಾಮಚಂದ್ರನ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮ ಹುಟ್ಟಿದನೆಂಬುದಕ್ಕೆ ಸಾಕ್ಷಿ ಕೇಳಿದ ಕಾಂಗ್ರೆಸ್ ಪಕ್ಷವು ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿ ಸನಾತನ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧ ವ್ ಕಿಡಿಕಾರಿದರು.

ಹಲಕರ್ಟಿಯ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಇಂಗಳಗಿ ಮಹಾ ಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ರಾಮನ ಹುಟ್ಟನ್ನು ಪ್ರಶ್ನಿಸಿದ ಕಾಂಗ್ರೆಸ್ ಶ್ರೀರಾಮ ಮಂದಿರ ನಿರ್ಮಾಣವಾಗದಂತೆ ತಡೆಯಲು ಸುಪ್ರೀಂಕೋರ್ಟಿನಲ್ಲಿ ಅಫಿದಾವಿತ್ ಸಲ್ಲಿಸಿ 20 ವರ್ಷಗಳ ಕಾಲ ಮಂದಿರ ನಿರ್ಮಾಣವಾಗದಂತೆ ಹೋರಾಟ ನಡೆಸಿತು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಗೌರವಯುತವಾಗಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಪತ್ರ ನೀಡಿದರೂ ಅದರ ನಾಯಕರು ಗೈರುಹಾಜರಾದರಲ್ಲದೆ ಕಪ್ಪು ಬಟ್ಟೆ ಸುತ್ತಿ ಪ್ರತಿಭಟನೆಯನ್ನು ನಡೆಸಿ ಹಿಂದೂ ವಿರೋಧಿ ಮಾನಸಿಕತೆಯನ್ನು ಪ್ರದರ್ಶಿಸಿದರು. ತುಷ್ಟಿಕರಣ ನೀತಿಯಿಂದ ಒಂದು ಸಮುದಾಯದ ಓಲೈಕೆಗಾಗಿ ನೀಚ ರಾಜಕಾರಣ ಮಾಡಿ ಭಾರತದ ಸನಾತನ ಹಿಂದೂ ಧರ್ಮೀಯರ ಮನಸ್ಸಿಗೆ ಘಾಸಿ ಮಾಡಿದ ಕಾಂಗ್ರೆಸ್ಸಿಗೆ ಈ ಬಾರಿ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತವಾಗಿದೆ. ಎರಡು ಮೂರು ವರ್ಷಗಳ ಕಾಲ ಸುಪ್ರೀಂಕೋರ್ಟಿನಲ್ಲಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮಾಡಿ ಅದರಂತೆ ಐತಿಹಾಸಿಕ ತೀರ್ಪು ಪಡೆದ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಮಸೀದಿ ನಿರ್ಮಾಣಕ್ಕೆ ಜಮೀನು ನೀಡಿ ನರೇಂದ್ರ ಮೋದಿಯವರು ನಿಜವಾದ ಜಾತ್ಯಾತೀತ ನಿಲುವನ್ನು ವ್ಯಕ್ತಪಡಿಸಿದ ಒಬ್ಬ ರಾಷ್ಟ್ರ ಸಂತ ಎಂದು ಶ್ಲಾಘಿಸಿದರು.

ಎಲ್ಲರ ಭಾವನೆ ಗೌರವಿಸುವ ಪಕ್ಷ ಬಿಜೆಪಿಯಾಗಿದ್ದು ಅದಕ್ಕಾಗಿ ಜಗತ್ತಿನಲ್ಲಿ ಭಾರತಕ್ಕೆ ಎತ್ತರದ ಸ್ಥಾನವಿದೆ ಮತ್ತು ಮೋದಿಯವರನ್ನು ವಿಶ್ವ ನಾಯಕನಾಗಿ ಎಲ್ಲರೂ ಗೌರವಿಸುತ್ತಿದ್ದಾರೆ. 500 ವರ್ಷಗಳ ಕರಾಳ ಇತಿಹಾಸ ತೊಡೆದು ಹಾಕಿ ಭಾರತದಲ್ಲಿ ರಾಮರಾಜ್ಯ ನಿರ್ಮಾಣದ ಕನಸನ್ನು ಸಾಕಾರಗೊಳಿಸಲು ಮೋದಿಯವರು ದಿಟ್ಟ ಹೆಜ್ಜೆ ಇಡುತ್ತಿದ್ದಾರೆ ಎಂದು ಹೇಳಿದರು.

ಕಾಶ್ಮೀರದಲ್ಲಿ 370ನೇ ವಿಧಿ ರದ್ಧತಿಯಿಂದ ಈಗ ಶಾಂತಿ ನೆಲೆಸಿ ಅಭಿವೃದ್ಧಿಯತ್ತ ಧಾಪುಗಾಲು ಹಾಕಲಾಗುತ್ತಿದೆ. ಮೋದಿ ಗ್ಯಾರಂಟಿಯಿಂದ ದೇಶದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ25ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಸ್ಕೀಮಿಗೆ ನೀಡಿ ದಲಿತ ಬಂಧುಗಳನ್ನು ಶಾಶ್ವತವಾಗಿ ಹಿಂದುಳಿಯುವಂತೆ ಮಾಡಿ ಅಂಬೇಡ್ಕರ್ ಸಿದ್ಧಾಂತಗಳಿಗೆ ಎಳ್ಳು ನೀರು ಬಿಟ್ಟಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ಹಾಗೂ ಸ್ವಯಂಘೋಷಿತ ದಲಿತ ನಾಯಕರೆಂದು ಫೋಸ್ ಕೊಡುವವರು ಮತ ಬೇಟೆಗೆ ಬಂದಾಗ ಪ್ರಜ್ಞಾವಂತ ಮತದಾರರು ಹಾಗೂ ದಲಿತ ಬಂಧುಗಳು ಪ್ರಶ್ನೆ ಎತ್ತಿ ಅವರಿಗೆ ಮಂಗಳಾರತಿ ಮಾಡಿ ಕಳುಹಿಸಬೇಕು. ರಾಜ್ಯದಲ್ಲಿ ಮೋದಿ ಅಲೆಯಿಂದಾಗಿ ಕಾಂಗ್ರೆಸ್ ಈ ಬಾರಿ ಧೂಳಿಪಟವಾಗಲಿದೆ. ಮೋದಿಯವರ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತ. ಮೇ ಏಳರಂದು ಎಲ್ಲರೂ ಮತಗಟ್ಟೆಗೆ ತೆರಳಿ ಶೇಕಡಾ ನೂರರಷ್ಟು ಮತದಾನ ಮಾಡಿ ಸದನಾಥನ ಹಿಂದೂ ಧರ್ಮದ ರಕ್ಷಣೆ ಮುಂದಿನ ಜನಾಂಗದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ ಎರಡನೇ ಬಾರಿಗೆ ಕಲಬುರ್ಗಿಯಿಂದ ಕಮಲವನ್ನು ಅರಳಿಸಬೇಕು ಎಂದು ಜಾಧವ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಾಬುರಾವ್ ಚೌಹಾಣ್, ಲಿಂಗಾರೆಡ್ಡಿ ಬಾಸರೆಡ್ಡಿ, ಮಲ್ಲಣ್ಣ ಸಾಹುಕಾರ್, ಶರಣಪ್ಪ ತಳವಾರ್, ಚಂದ್ರಶೇಖರ ಅವಂಟಿ ವಿಠಲ ನಾಯಕ್, ಸೋಮು ಚೌಹಾನ್, ನಾಗಣ್ಣ ಲಾಡ್ಲಾಪುರ, ಬಸು ಸಾಹುಕಾರ್, ಈರಣ್ಣ ಸಾಹುಕಾರ್, ರಾಜು ಗೌಡ ಪೊಲೀಸ್ ಪಾಟೀಲ್, ಗಂಗಮ್ಮ ಪೂಜಾರಿ, ಗೋಪಾಲ್ ನಾಯಕ್, ಸಿದ್ದಲಿಂಗ ಸ್ವಾಮಿ, ಚಂದ್ರಶೇಖರ, ಶಾಂತಗೌಡ ಪಾಟೀಲ್, ನಾಗಯ್ಯ ಸ್ವಾಮಿ, ಅಸ್ಲಾಂ ಪಟೇಲ್, ಅಪ್ಪು ಸಾಹುಕಾರ್, ಅಶೋಕ್ ಮತ್ತಿತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago