ವಾಡಿ: ಸಮೀಪದ ಹಳಕರ್ಟಿ ಗ್ರಾಮದಲ್ಲಿ ಏ.19 ರಂದು ನಡೆಯಲಿರುವ ಶ್ರೀಸಿದ್ದೇಶ್ವರ ಧ್ಯಾನಧಾಮದ ಶ್ರೀರಾಜಶೇಖರ ಸ್ವಾಮೀಜಿ ಅವರ ಪಟ್ಟಾಧೀಕಾರ ಮಹೋತ್ಸವದ ದಿವ್ಯ ಸಾನಿಧ್ಯ ವಹಿಸಲು ರಂಭಾಪುರಿ ಪೀಠದ ಜಗದ್ಗುರು ಶ್ರೀಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಆಗಮಿಸುತ್ತಿದ್ದಾರೆ.
ಏ.18 ರಂದು ಸಂಜೆ 5:00 ಗಂಟೆಗೆ ಜಗದ್ಗುರುಗಳು ಅಡ್ಡಪಲ್ಲಕ್ಕಿ ಉತ್ಸವದ ಮೂಲಕ ಪುರಪ್ರವೇಶ ಮಾಡುವರು. ಏ.19 ರಂದು ಬೆಳಗ್ಗೆ 11:00 ಗಂಟೆಗೆ ಬ್ರಾಹ್ಮಿ ಮೂಹೂರ್ತದಲ್ಲಿ ರಂಭಾಪುರಿ ಶ್ರೀಗಳು ಶ್ರೀರಾಜಶೇಖರ ಸ್ವಾಮೀಜಿ ಅವರಿಗೆ ಪಂಚಮುದ್ರಾ ಪ್ರಧಾನ ಮಾಡುವ ಮೂಲಕ ಪಟ್ಟಾಧೀಕಾರ ನೆರವೇರಿಸುವರು.
ಇದೇ ವೇಳೆ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ದೇವಸ್ಥಾನಗಳಲ್ಲಿ ತುಳಜಾಪುರ ಅಂಬಾಭವಾನಿ ಮೂರ್ತಿ ಸ್ಥಾಪನೆ ಹಾಗೂ ಪ್ರಾಣ ಪ್ರತಿಷ್ಠಾಪನೆ, ಮಹಾಗಣಪತಿ ಹಾಗೂ ನವಗ್ರಹ ನಂದಿ ಧ್ವಜಸ್ತಂಭ ಸ್ಥಾಪನೆ ಮಾಡಲಾಗುತ್ತಿದೆ. ಪಲ್ಲಕ್ಕಿ ಉತ್ಸವದ ಜತೆಗೆ ದೇವಸ್ಥಾನಗಳಿಗೆ ಪೂಜ್ಯರಿಂದ ಸಾಂಪ್ರದಾಯಿಕ ಕಳಸಾರೋಹಣ ಕೂಡ ನೆರವೇರಲಿದೆ.
ಈ ಬೃಹತ್ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯರು, ಗಣ್ಯರು, ಗ್ರಾಮದ ಮಹಿಳೆಯರು ಹಾಗೂ ಸಾವಿರಾರು ಜನ ಭಕ್ತರು ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…