ಬಿಸಿ ಬಿಸಿ ಸುದ್ದಿ

ದೇಶದಲ್ಲಿ ಬಿಜೆಪಿ ಆಡಳಿತ ಶ್ರಮಿಕರನ್ನು ನಿರ್ನಾಮ ಮಾಡುತ್ತಿದೆ; ಬಿಜೆಪಿ ಸೋಲಿಸಲು ಒಕ್ಕೋರಲ ಕರೆ | ಕೆ.ನೀಲಾ

ಸುರಪುರ: ದೇಶದಲ್ಲಿ ಇಂದು ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ದೀನ ದಲಿತ ಶ್ರಮಿಕರನ್ನು ನಿರ್ನಾಮ ಮಾಡುತ್ತಿದೆ ಎಂದು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಕೆ.ನೀಲಾ ಆಕ್ರೋಶ ವ್ಯಕ್ತಪಡಿಸಿದರು.

ನಗರದ ರಂಗಂಪೇಟೆಯ ಶಾದಿ ಮಹಲ್‍ನಲ್ಲಿ ಸಿಪಿಐ(ಎಂ) ವತಿಯಿಂದ ಸಂವಿಧಾನ ಸಂರಕ್ಷಿಸಿ ದೇಶ ಉಳಿಸಿ ಎನ್ನುವ ಘೋಷ ವಾಕ್ಯದೊಂದಿಗೆ ಬಿಜೆಪಿ ಪಕ್ಷವನ್ನು ಸೋಲಿಸಿ ಎನ್ನುವ ಕರೆಯೊಂದಿಗೆ ನಡೆದ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ,ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ,ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ,ರೈತರ ಬೇಡಿಕೆಗಳು ಈಡೇರಿಸುತ್ತಿಲ್ಲ,ಆತ್ಮಹತ್ಯೆಗಳ ಸರಣಿ ಮುಂದುವರೆದಿದೆ,ಆದರೆ ಪ್ರಧಾನಮಂತ್ರಿಯವರು ಮಾತ್ರ ದೇಶವನ್ನು ಉದ್ಧಾರ ಮಾಡಿದ್ದೇವೆ ಎಂದು ಭಾಷಣ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಣಿಪುರದಲ್ಲಿ ಮಹಿಳೆಯರ ಮೇಲೆ ಘೋರ ಕೃತ್ಯಗಳು ನಡೆಯುತ್ತವೆ,ಬಿಲ್ಕಿಸ್ ಬಾನು ಪ್ರಕರಣದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಚಾರ,ಅವರ ಕುಟುಂಬದವರ ಕೊಲೆ ನಡೆದಿವೆ ಇಂತಹ ಘಟನೆಗಳನ್ನು ತಡೆಯುವಲ್ಲಿ ಬಿಜೆಪಿ ಸರಕಾರ ಸಂಪೂರ್ಣವಾಗಿ ಸೋತಿದೆ,ಆದ್ದರಿಂದ ಈಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಎಲ್ಲರು ಸೋಲಿಸಲೆಬೇಕು ಎಂದು ಕರೆ ನೀಡಿದರು.

ಸಿಪಿಐ (ಎಂ) ಜಿಲ್ಲಾ ಮುಖಂಡ ದವಲಸಾಬ್ ನದಾಫ್ ಮಾತನಾಡಿ,ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿಎಎ ಜಾರಿಗೊಳಿಸಿ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಹೊರಟಿದ್ದಾರೆ,ಹಿಂದು ಮುಸ್ಲೀಂ ಎನ್ನದೆ ಭಾವೈಕ್ಯತೆ ಒಬ್ಬರಿಗೊಬ್ಬರು ಅಣ್ಣ ತಮ್ಮಂದಿರಂತೆ ಜೀವನ ನಡೆಸುತ್ತಿರುವವರಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಚನ್ನಪ್ಪ ಆನೆಗುಂದಿ ಮಾತನಾಡಿ,2014 ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿದೇಶ ದಿಂದ ಕಪ್ಪು ಹಣ ತಂದು ಪ್ರತಿ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದರು,ಯುವ ಜನರಿಗಾಗಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದರು ಉದ್ಯೋಗವನ್ನು ಕೊಡಲಿಲ್ಲ,ಎಮ್.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಿ ರೈತರಿಗೆ ಬೆಂಬಲ ಬೆಲೆ ನೀಡಿ 2022ಕ್ಕೆ ರೈತರನ್ನು ಎರಡು ಪಟ್ಟು ಶ್ರೀಮಂತರನ್ನಾಗಿ ಮಾಡುತ್ತೇನೆಂದು ಹೇಳಿದ್ದರು ಆದರೆ ಇದ್ಯಾವುದು ಇಡೇರಿಸಿಲ್ಲ,ಇಂತಹ ಸರಕಾರ ನಮಗೆ ಬೇಡ ನಮಗೆ ರೈತ ಕಾರ್ಮಿಕರ ಏಳಿಗೆಗೆ ಶ್ರಮಿಸುವ ಸರಕಾರ ಬೇಕಿದೆ,ಅದಕ್ಕಾಗಿ ಬಿಜೆಪಿಯನ್ನು ಸೋಲಿಸಲೆಬೇಕು ಎಂದರು.

ವೇದಿಕೆಯಲ್ಲಿ ಸಿಪಿಐ (ಎಂ) ಜಿಲ್ಲಾ ಮುಖಂಡರಾದ ಎಸ್.ಎಮ್.ಸಾಗರ,ಜೈಲಾಲ ತೋಟದಮನಿ,ಕಪ್ರಾರೈ ಸಂಘದ ತಾ.ಅಧ್ಯಕ್ಷ ಧರ್ಮಣ್ಣ ದೊರೆ,ಕೂಲಿಕಾರರ ಸಂಘದ ರಾಜ್ಯ ಸಮಿತಿ ಮುಖಂಡರಾದ ಮಲ್ಲಮ್ಮ ಕೊಡ್ಲಿ ಸೇರಿದಂತೆ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago