ಕಲಬುರಗಿ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆಂದು ಮಂಡ್ಯ ಲೋಕಸಭಾ ಎನ್ ಡಿಎ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಯನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಠೋಡ ತ್ರೀವ್ರವಾಗಿ ಖಂಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರು ಒಳ್ಳೆಯ ಕುಟುಂಬದಿಂದ ಬಂದವರಾಗಿದ್ದು.ಅವರ ಈ ಮಾತಿನಿಂದ ಹೆಣ್ಣು ಮಕ್ಕಳ ಸ್ವಾಭಿಮಾನದ ಬದುಕು ಕಟ್ಟಿಕೊಡಬೇಕೆಂದು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿದೆ ಇದನ್ನು ಸಹಿಸಲಾರದೆ ಕುಮಾರಸ್ವಾಮಿ ಅವಹೇಳನ ಮಾಡಿದ್ದಾರೆ.
ಹೆಣ್ಣು ಮಕ್ಕಳು ಅಭಿವೃದ್ಧಿ ಆಗುವುದು ಕುಮಾರಸ್ವಾಮಿ ಅವರಿಗೆ ಬೇಕಿಲ್ಲವೇ ಕುಮಾರಸ್ವಾಮಿ ಅವರಿಗೆ ಇದು ಶೋಭೆ ಅಲ್ಲ ಈ ಹಿಂದೆ ಸುಮಲತಾ ಅಂಬರೀಶ್ ಅವರ ಬಗ್ಗೆ ಪ್ರಶ್ನೆ ಮಾಡಿದ ಬಡ ಮಹಿಳೆ ಬಗ್ಗೆ ಹೀಗೆ ಮಾತನಾಡಿದರು. ಮಂಡ್ಯದಲ್ಲಿ ಓಟು ಕೇಳಲು ಬರುತ್ತಿರುವ ಕುಮಾರಸ್ವಾಮಿಯವರಿಗೆ ಮಂಡ್ಯದ ಸ್ವಾಭಿಮಾನ ಮಹಿಳೆಯರು ಉತ್ತರ ಕೊಡಲಿದ್ದಾರೆ.
ಕುಮಾರಸ್ವಾಮಿ ಅವರಿಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಹೋರಾಟವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಚುನಾವಣಾ ಆಯೋಗ, ಮಹಿಳಾ ಆಯೋಗಕ್ಕೂ ದೂರು ಕೊಡುತ್ತೇವೆ. ಕುಮಾರಸ್ವಾಮಿ ಅವರ ಹೇಳಿಕೆಗೆ ಮೈತ್ರಿ ಪಕ್ಷವಾದ ಬಿಜೆಪಿಗೂ ಇದರಿಂದ ಹಿನ್ನಡೆಯಾಗಲಿದೆ. ಸ್ವಾಭಿಮಾನಿ ಮಹಿಳೆಯರು ಕುಮಾರ ಸ್ವಾಮಿಯವರನ್ನು ಸೋಲಿಸಿ ಮನೆಗೆ ಕಳಿಸಬೇಕು ಇಡೀ ರಾಜ್ಯದ ಮಹಿಳೆಯರಿಗೆ ಎಸಗಿದ ಅವಮಾನವಾಗಿದೆ ಎಂದು ಲತಾ ರಾಠೋಡ ತೀವ್ರ ಖಂಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…