ಕಲಬುರಗಿ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಏಪ್ರಿಲ್ 18ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದ್ದು ಕಾರ್ಯಕರ್ತರು ಮತ್ತು ಅಭಿಮಾನಿಗಳು ಆ ದಿನದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಕರೆ ನೀಡಿದ್ದಾರೆ.
ಏಪ್ರಿಲ್ 18ರಂದು ಕಲ್ಬುರ್ಗಿಯ ನಗರೇಶ್ವರ ಶಾಲಾ ಆವರಣದಿಂದ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಪ್ರಾರಂಭವಾಗಲಿದೆ. ನಗರೇಶ್ವರ ಶಾಲೆಯಿಂದ ಸೂಪರ್ ಮಾರ್ಕೆಟ್, ಜಗತ್ ವೃತ್ತ ದಾರಿಯಾಗಿ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯಾಗಲಿದೆ. ನಾಮಪತ್ರ ಸಲ್ಲಿಸುವ ಬೃಹತ್ ಮೆರವಣಿಗೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಹಾಗೂ ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.