ಕಲಬುರಗಿ: ರಾಜ್ಯದ 58 ಸಾವಿರಕ್ಕೂ ಹೆಚ್ಚು ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಆಕ್ರಮ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಬುಧವಾರ ಮಧ್ಯಾಹ್ನ ಜಿಲ್ಲೆಯಲ್ಲಿರುವ ಆರ್.ಡಿ ಪಾಟೀಲ್ ಮನೆಗೆ ಭೇಟಿ ನೀಡಿ ಆರ್.ಡಿ ಪಾಟೀಲ್ ಸಹೋದರ ಮಹಾಂತೇಶ್ ಪಾಟೀಲ್ ಮತ್ತು ಸೇರಿದಂತೆ ಕುಟುಂಬದ ಸದಸ್ಯರಿಗೆ ಭೇಟಿ ನೀಡಿ ಮಾತುಕತೆ ನಡೆಸಿ ಅವರೊಂದಿಗೆ ಊಟೋಪಚಾರ ಮಾಡಿರುವ ಫೋಟೋಗಳು ಇದೀಗ ವೈರಲ್ ಆಗಿವೆ.
PSI ಮರುಪರೀಕ್ಷೆ ವೇಳೆ ಕೂಡ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು ಜೈಲುಗಂಬಿ ಎಣಿಸುತ್ತಿರುವ RD ಪಾಟೀಲ್ ಮನೆಗೆ ಜಾಧವ್ ಭೇಟಿಯಾರುವುದನ್ನು ಸಮರ್ಥಸಿಕೊಳ್ಳುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೂ ಬಿಸಿತುಪ್ಪವಾಗಿದಲ್ಲದೇ ಜನರಿಗೆ ಯಾವ ರೀತಿಯ ಸಂದೇಶ ನೀಡಲು ಬಿಜೆಪಿ ಸಂಸದ ಮುಂದಾಗಿದ್ದಾರೆ? ಎಂಬ ಪ್ರಶ್ನೆಗೆ ಜಿಲ್ಲೆಯ ಯಾವುದೇ ಬಿಜೆಪಿ ನಾಯಕರ ಬಳಿಯೂ ಉತ್ತರವಿಲ್ಲದಂತಾಗಿದೆ.
ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ವ್ಯಕ್ತಿಯ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೈಲಿನಲ್ಲಿದ್ದು ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಚುನಾವಣೆಯಲ್ಲಿ ಸಹಕರಿಸುವಂತೆ ಸಂಸದ ಜಾಧವ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.