13 ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲಿ: ಅಮರನಾಥ ಪಾಟೀಲ

0
56

ಕಲಬುರಗಿ: ರಾಜ್ಯದಲ್ಲಿ ಸರ್ಕಾರ ರಚನೆಯಾಗಿ 11 ತಿಂಗಳಾಗುತ್ತ ಬಂದರೂ ಈವರೆಗೆ ಯಾವುದೇ ಅಭಿವೃದ್ಧಿಕೆಲಸಗಳಾಗಿಲ್ಲ.ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದರೂ ನೀವ್ಯಾಕೆ ಸುಮ್ಮನಿದ್ದೀರಿ? ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಳ್ಳುವಿರೋ ಅಥವಾ ಇಲ್ಲವೋ? ರಾಜ್ಯದ ರೈತರಿಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸುವಿರಾ? ಅಥವಾ ಸಮರ್ಥಿಸಿಕೊಳ್ಳುವಿರಾ? ಮಹಿಳೆಯರ ರಕ್ಷಣೆಗೆ ಯಾರು ಹೊಣೆ?

ಹೀಗೆ ಒಂದಾದ ಮೇಲೆ ಒಂದರಂತೆ ಪ್ರಶ್ನೆ ಕೇಳಿದವರು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬೀದರ್ ಲೋಕಸಭೆ ಚುನಾವಣೆಯ ಉಸ್ತುವಾರಿ ವಹಿಸಿರುವ ಅಮರನಾಥ ಪಾಟೀಲ ಅವರು. ಈ ಪ್ರಶ್ನೆಗಳು ರಾಜ್ಯ ಸಿಎಂ ಅಥವಾ ಡಿಸಿಎಂ ಅಥವಾ ವಿವಿಧ ಇಲಾಖೆಯ ಮಂತ್ರಿಗಳಿಗಲ್ಲ. ನೇರವಾಗಿ ಅವರು ಪ್ರಶ್ನೆ ಹಾಕಿದ್ದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನೇತಾರ ರಾಹುಲ್ ಗಾಂಧಿ ಅವರಿಗೆ.

Contact Your\'s Advertisement; 9902492681

ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಕ್ಕೆ ಆಗಮಿಸಿರುವ ಅವರಿಗೆ ರಾಜ್ಯದ ಜನತೆಯ ಪರವಾಗಿ 13 ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗುತ್ತಿಗೆದಾರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಶೇ. 60ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಬ್ರಾಂಡ್ ಬೆಂಗಳೂರು ಬಾಂಬ್ ಬೆಂಗಳೂರು ಆಗಿದೆ. ಗ್ಯಾರಂಟಿ ಹೆಸರಲ್ಲಿ ಬೆಲೆ ಏರಿಕೆ, ವಿದ್ಯತ್ ರ ಹೆಚ್ಚಳ, ಎಸ್.ಆರ್. ವ್ಯಾಲ್ಯೂ ದರ ಹೆಚ್ಚಳವಾಗಿದೆ ಎಂದರು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ನೇತಾರರಾದ ರಾಹುಲ್ ಗಾಂಧಿ ಸಮರ್ಥ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ಎಂಎಲ್‍ಸಿ ಬಿ.ಜಿ. ಪಾಟೀಲ, ಬಾಬುರಾವ ಹಾಗರಗುಂಡಗಿ, ಸಂತೋಷ ಹಾದಿಮನಿ, ನಾಗರಾಜ ಮಹಾಗಾಂವಕರ್ ಉಪಸ್ಥಿತರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here