ಕಲಬುರಗಿ: ಅಫಜಲ್ ಪುರ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ಅಫಜಲ್ ಪುರ ಮತಕ್ಷೇತ್ರದ ಗೊಬ್ಬೂರು ( ಬಿ ) ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕನಸಿದ್ದು. ಕಳೆದ ಐದು ವರ್ಷದಲ್ಲಿ ಅಭಿವೃದ್ದಿ ಕಾರ್ಯಗಳು ನಡೆದಿರಲಿಲ್ಲ. ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಜಿಲ್ಲೆಯ ಅಭಿವೃದ್ದಿಗೆ ದುಡಿಯುವುದಾಗಿ ಅವರು ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 5.28 ಲಕ್ಷ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಅಕ್ಕಿ ಖರೀದಿಸಲು ರೂ 178 ರೂ ಹಣ ನೇರವಾಗಿ ಹಾಕಲಾಗುತ್ತಿದೆ. 19.12 ಲಕ್ಷ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಹೋಗುತ್ತಿದೆ. ಯುವನಿಧಿ ಯೋಜನೆಯಡಿಯಲ್ಲಿ 20,000 ಯುವಕರಿಗೆ ತಲಾ ರೂ 1500 ರಿಂದ ರೂ 3000 ನೀಡಲಾಗುತ್ತಿದೆ ಇದು ನಮ್ಮ ಬದ್ಧತೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಜಿಲ್ಲೆಗೆ ಮಂಜೂರಾಗಿದ್ದ ಪ್ರತ್ಯೇಕ ರೇಲ್ವೆ ವಲಯ, ನಿಮ್ಝ್, ಜವಳಿ ಪಾರ್ಕ್ ಯೋಜನೆಗಳು ಅನುಷ್ಠಾನಗೊಳ್ಳದೇ ವಾಪಸ್ ಹೋದವು. ಸಂಸದ ಉಮೇಶ್ ಜಾಧವ ಈ ಎಲ್ಲ ಯೋಜನೆಗಳನ್ನು ಜಿಲ್ಲೆಗೆ ತರುವಲ್ಲಿ ವಿಫಲರಾಗಿದ್ದಾರೆ. ಈ ಸಲ ಕಾಂಗ್ರೆಸ್ ಅಭ್ಯರ್ಥಿ ರಾಧಾ ಕೃಷ್ಣ ಅವರನ್ನು ಗೆಲ್ಲಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃಧ್ಧಿ ಕೆಲಸ ಮಾಡಲು ಅನುಕೂಲ ಮಾಡಿಕೊಡಿ ಎಂದು ಮನವಿ ಮಾಡಿದರು.
ಶಾಸಕರಾದ ಎಂ ವೈ ಪಾಟೀಲ್ ಮಾತನಾಡಿ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸಿದ್ದಾರೆ. ಅವರಿಗೆ ಅವಕಾಶ ನೀಡಬೇಡಿ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಕೇಂದ್ರದಲ್ಲಿ ಬಡವರ ಪರ ಸರ್ಕಾರ ಬರಲು ಆಶೀರ್ವಾದ ಮಾಡಿ ಎಂದರು.
ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಮಾತನಾಡಿ ಬರೀ ಸುಳ್ಳು ಮೋಸವನ್ನೇ ಬಂಡವಾಳ ಮಾಡಿಕೊಂಡಿರುವ ಮೋದಿ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿರುವ ಮೋದಿ ಬಂಡವಾಳಶಾಹಿಗಳ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ತಮ್ಮ ಬಳಕೆಯ ವಸ್ತುಗಳಿಗೆ ಸಾರ್ವಜನಿಕರ ಹಣ ದುಂದುವೆಚ್ಚ ಮಾಡುತ್ತಾ ದಿನಕ್ಕೆ ನಾಲ್ಕು ಬಟ್ಟೆ ಬದಲಾಯಿಸಿಕೊಂಡು ನಾಟಕವಾಡುತ್ತಿದ್ದಾರೆ. ಅವರು ಮತ್ತೊಮ್ಮೆ ಗೆದ್ದು ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯಲ್ಲ. ನಾಗಪುರದ ನಿರ್ದೇಶನದಂತೆ ರಾಷ್ಟ್ರ ನಡೆಯುತ್ತದೆ. ಹಾಗಾಗದಂತೆ ನೀವೆಲ್ಲ ತಡೆಯಬೇಕು ಎಂದು ಮನವಿ ಮಾಡಿದರು.
ವೇದಿಕೆಯ ಮೇಲೆ ಅರುಣ್ ಪಾಟೀಲ, ಮಶಾಕ್ ಪಟೇಲ್, ರಾಜಗೋಪಾಲರೆಡ್ಡಿ, ರಾಜೇಂದ್ರ ಪಾಟೀಲ್ , ಲಚ್ಚಪ್ಪ ಜಮಾದಾರ ಸೇರಿದಂತೆ ಹಲವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…