ಕಲಬುರಗಿ: ಸೇರಿದಂತೆ ರಾಜ್ಯದ ಹಲವಾರು ಕಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ದ ಅವರದೇ ಪಕ್ಷದ ಕಾರ್ಯಕರ್ತರು ಗೋ ಬ್ಯಾಕ್ ಅಭಿಯಾನ ನಡೆಸುತ್ತಿದ್ದಾರೆ. ಇದನ್ನು ಗಮನಿಸದರೆ ಸಂಸದರಾಗಿ ಅವರು ಹೇಗೆ ಕೆಲಸ ಮಾಡಿದ್ದಾರೆ ಎನ್ನುವುದಕ್ಕೆ ಹಿಡಿದ ಕೈಗನ್ನಡಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮಾಡಬೂಳ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ವಿಧಾನ ಸಭೆ ಚುನಾವಣೆ ಪೂರ್ವದಲ್ಲಿ ನಿಮಗೆಲ್ಲ ಭರವಸೆ ನೀಡಿದಂತೆ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ಈ ಯೋಜನೆಗಳಿಂದಾಗಿ ರಾಜ್ಯ ಜನರಲ್ಲಿ ಆರ್ಥಿಕ ಸಬಲತೆ ಬಂದಿದೆ. ಇದು ನಮ್ಮ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಬಿಜೆಪಿಯವರಿಗೆ ನೀವು ಊರೊಳಗೆ ಬಿಟ್ಟುಕೊಳ್ಳಬೇಡಿ ಎಂದು ಹೇಳಿದ ಸಚಿವರು, ಮಕ್ಕಳಿಗೆ ಪೌಷ್ಠಿಕಾಂಶದ ಆಹಾರ ಖರೀದಿ ಮಾಡುವುದು, ಶಾಲೆಯ ಫೀಸು ಕಟ್ಟುವುದು ಎಂದರೆ ದಾರಿ ತಪ್ಪುವುದು ಎಂದು ಅರ್ಥನಾ ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸಿಲ್ಲ. ಸಂಸದರಾಗಿ ಉಮೇಶ ಜಾಧವ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ರೂ 18000 ಕೋಟಿ ಸಂವಿಧಾನಬದ್ದ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಜಾಧವ ಅವರೇ ಈ ಬಗ್ಗೆ ಎಂದಾದರೂ ನೀವು ಪ್ರಶ್ನೆ ಮಾಡಿದ್ದೀರಾ ? ರೇಲ್ವೆ ಗೆ ಹಸಿರು ನಿಶಾನೆ ತೋರಿಸುವುದು ಹಾಗೂ ಮನ್ ಕೀ ಬಾತ್ ಕೇಳುವುದೇ ನಿಮ್ಮ ಸಾಧನೆಯೇ ? ಎಂದು ಪ್ರಶ್ನಿಸಿದ ಸಚಿವರು ಬಿಜೆಪಿಯವರು ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುತ್ತಾರೆ ಅವರ ಮಾತುಗಳಿಗೆ ಬೆಲೆ ಕೊಡಬೇಡಿ. ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಭಿವೃದ್ದಿಗೆ ಸಹಕರಿಸಿ ಎಂದು ಮನವಿ ಮಾಡಿದರು.
ಲೋಕಸಭೆ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ತಮಗೆ ಸೇವೆ ಮಾಡುವ ಅವಕಾಶ ನೀಡಿದರೆ ಜಿಲ್ಲೆಯ ಅಭಿವೃದ್ದಿಗೆ ಶ್ರಮವಹಿಸುವುದಾಗಿ ಹೇಳಿದರು. ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರೆಳಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ ಮತಯಾಚಿಸಿ ಎಂದು ಮನವಿ ಮಾಡಿದರು.
ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ರಮೇಶ ಮರಗೋಳ, ಬಸವರಾಜ ಪೂಜಾರಿ ಸುನೀಲ್ ದೊಡ್ಮನಿ ಮಾತನಾಡಿದರು.
ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಭಾಗನಗೌಡ ಸಂಕನೂರ, ಅರವಿಂದ ಚವ್ಹಾಣ, ಶಿವಾನಂದ ಪಾಟೀಲ್, ನಾಮದೇವ ರಾಠೋಡ, ಯಲ್ಲಾಲಿಂಗ ಪೂಜಾರಿ, ಶಿವಯ್ಯ ಗುತ್ತೇದಾರ, ಶಿವಕುಮಾರ ಪೇಠಶಿರೂರ, ರತನ್ ಕನ್ನಡಗಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…