ಕಲಬುರಗಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ ಎರಡು ಸಾವಿರ ಬರ ಪರಿಹಾರ ನೀಡಿದೆ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು.
ನಗರದ ಜಿಲ್ಲಾ ಚುನಾವಣಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬರಗಾಲದಲ್ಲಿ 18-20 ಸಾವಿರ ರೂ. ಪರಿಹಾರ ನೀಡಲಾಗಿದೆ. ಆದರೆ, ಈಗಿನ ಸಿದ್ದರಾಮಯ್ಯ ಸರ್ಕಾರ ಕೇವಲ ಎರಡು ಸಾವಿರ ರೂಪಾಯಿಗಳನ್ನು ಭಿಕ್ಷುಕರಂತೆ ರೈತರಿಗೆ ನೀಡಿದೆ ಎಂದು ಆಪಾದನೆ ಮಾಡಿದರು.
ಬರ ಪರಿಹಾರ ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದರು.