ಜನರು ಸೇವೆ ಮಾಡಲು ಒಂದು ಅವಕಾಶ ಕೊಟ್ಟರೆ ಸಮಗ್ರ ಅಭಿವೃದ್ದಿಗೆ ಶ್ರಮಿಸುವೆ: ರಾಧಾಕೃಷ್ಣ ದೊಡ್ಡಮನಿ

0
14

ಅಫಜಲಪುರ: ಜನರು ಸೇವೆ ಮಾಡಲು ತಮಗೆ ಒಂದು ಅವಕಾಶ ಕೊಟ್ಟರೆ ಸಮಗ್ರ ಅಭಿವೃದ್ದಿಗೆ ಶ್ರಮಿಸುವುದಾಗಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.

ಬಡದಾಳ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ‌ ಅವರು ಮಾತನಾಡಿದರು.

Contact Your\'s Advertisement; 9902492681

ಕಲಬುರಗಿ‌ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನೀಲಿನಕ್ಷೆ ತಯಾರಿಸಿದ್ದು ಜನರಿಗೆ ಅನುಕೂಲವಾಗುವಂತ ಕೆಲಸ ಮಾಡಲು ಮತದಾರರು ಆಶೀರ್ವದಿಸಬೇಕು ಎಂದರು.

ಶಾಸಕ ಎಂ ವೈ ಪಾಟೀಲ್ ಮಾತನಾಡಿ ಕಾಂಗ್ರೆಸ್‌ ಪಕ್ಷಕ್ಕೆ ಇತಿಹಾಸವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಪಕ್ಷ ತ್ಯಾಗ ಮಾಡಿದೆ. ಅಂತಹ ಪಕ್ಷದ ಹೆಮ್ಮೆಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳೆದ ಸಲ ಸೋಲಿಸಿದ ಜನರು ಈಗ ನಿರಾಸೆರಾಗಿದ್ದಾರೆ. ಸಂಸದರಾಗಿ ಉಮೇಶದ ಜಾಧವ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಈ ಸಲ ಬದಲಾವಣೆ ಮಾಡುವ ಅವಕಾಶವಿದೆ. ಹಾಗಾಗಿ‌ ನೀವು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಗೆಲ್ಲಿಸಿ ಎಂದು ಮನವಿ ಮಾಡಿದರು.

ನುಡಿದಂತೆ ನಡೆದ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ರಾಜ್ಯದ‌ಜನರು ನೆಮ್ಮದಿಯಿಂದ ಇದ್ದಾರೆ ಎಂದರು.

ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಮಾತನಾಡಿ ಮೋದಿ ಜನಪರ ರೈತರ ಪರ ಬಡವರ ಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ದೇಶದ ರೈತರು ಬೆಳೆಗೆ ಕನಿ಼ಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದರೂ ತಿರುಗಿ ನೋಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದರೆ, ಅವರು ಶ್ರೀಮಂತರ ಸಾಲ ಮನ್ನಾ ಮಾಡಿ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದರು.

ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ ಮೃದು ಮಾತಿನ ಜನಪರ ಕಾಳಜಿಯ ರಾಧಾಕೃಷ್ಣ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಾಜಿ ಎಂ ಎಲ್ ಸಿ ಶರಣಪ್ಪ ಮಟ್ಟೂರು ಮಾತನಾಡಿ ಬಿಜೆಪಿಗರು ಸುಳ್ಳು ಹೇಳಿ ಜಾಧವ್ ಅವರನ್ನು ಗೆಲ್ಲಿಸಿಕೊಂಡು ಹೋದರು. ಆದರೆ, ಜನರ ನಿರೀಕ್ಷೆ ಹುಸಿಯಾಗಿದೆ. ಈಗ ಮತ್ತೊಂದು ಅವಕಾಶ ನಿಮಗೆ ಬಂದಿದೆ. ನೀವೆಲ್ಲ ರಾಧಾಕೃಷ್ಣ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜೇಂದ್ರ ಪಾಟೀಲ್ ರೇವೂರು ಸೇರಿದಂತೆ ಹಲವರು ವೇದಿಕೆಯ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here