ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಏಪ್ರಿಲ್ 23ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 2368 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೇಯನ್ನು ಶಾಂತಿಯುತವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲೆಯಾದ್ಯಂತ ಒಟ್ಟು 11,162 ಸಿಬ್ಬಂದಿಗಳ ನೇಮಕ ಮಾಡಲಾಗಿದೆ ಎಂದು ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಮತದಾನವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ಜರುಗಲು ಗುಲಬರ್ಗಾ ಕಲಬುರಗಿ ಜಿಲ್ಲೆಯಾದ್ಯಂತ 2737 ಪೊಲಿಂಗ್ ಪಾರ್ಟಿ ಹಾಗೂ ಹೆಚ್ಚುವರಿಯಾಗಿ 369 ಪೊಲಿಂಗ್ ಪಾರ್ಟಿ ರಚಿಸಲಾಗಿದೆ. ಒಟ್ಟು 2737 ಮತಗಟ್ಟೆ ಅಧ್ಯಕ್ಷಾಧಿಕಾರಿಗಳನ್ನು, 2737 ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ 5474 ಮತದಾನಾಧಿಕಾರಿಗಳನ್ನು, 214 ಕಾಯ್ದಿರಿಸಿದ ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಸೇರಿದಂತೆ ಒಟ್ಟು 11,162 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಯಲ್ಲಿ 2775 ಬ್ಯಾಲೆಟ್ ಯೂನಿಟ್, 2775 ಕಂಟ್ರೋಲ್ ಯೂನಿಟ್ ಹಾಗೂ 3266 ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ.
ಕಲಬುರಗಿ ಜಿಲ್ಲೆಯಾದ್ಯಂತ ಒಟ್ಟು 21,26,276 ಮತದಾರರಿದ್ದು, ಅದರಲ್ಲಿ 10,78,077 ಪುರುಷ ಮತದಾರರು, 10,47,835 ಮಹಿಳಾ ಮತದಾರರು ಹಾಗೂ 364 ಇತರೆ ಮತದಾರರು ಮತದಾನದ ದಿನದಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ಕೆ.ಎಸ್.ಆರ್.ಟಿ.ಸಿ. ಬಸ್‍ಗಳು-232, ಜೀಪಗಳು 40, ಕ್ರೂಜರ್-481 ಹಾಗೂ 86 ಮಿನಿಬಸ್‍ಗಳು ಸೇರಿದಂತೆ ಒಟ್ಟು 839 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 9 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಧಾನಸಭಾವಾರು 9 ಮಾದರಿ ಮತಗಟ್ಟೆಗಳನ್ನು ಹಾಗೂ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 9 ವಿಕಲಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಬಾರಿ ಚುನಾವಣೆಯಲ್ಲಿ ವಿಕಲಚೇತನರಿಗೆ ವಿನೂತನ ವ್ಯವಸ್ಥೆಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು, ವಿಕಲಚೇತನ ಮತದಾರರನ್ನು ಮನೆಯಿಂದ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ದೃಷ್ಠಿ ದೋಷವುಳ್ಳವರಿಗೆ ಸಹಾಯವಾಗಲು ಬ್ರೈಲ್ ಬ್ಯಾಲೆಟ್ ಪೇಪರ್ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮತದಾನ ದಿನದಂದು ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಕಾಪಾಡುವ ದೃಷ್ಠಿಯಿಂದ ಮತದಾರರು ಮತಗಟ್ಟೆಗೆ ಮೊಬೈಲ್, ಕ್ಯಾಮೆರಾ ತರುವುದನ್ನು ನಿಷೇಧಿಸಲಾಗಿದೆ. ಜಿಲ್ಲೆಯ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…