ಬಿಸಿ ಬಿಸಿ ಸುದ್ದಿ

ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ

ಬೆಂಗಳೂರು: ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾದ ತಾಹೇರ್ ಹುಸೇನ್ ಕಡ್ಡಾಯವಾಗಿ ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ಹತ್ತು ವರ್ಷಗಳ ಆಡಳಿತ ಇಲ್ಲಿನ ಸಂವಿಧಾನದ ಆಶಯವನ್ನು ದುರ್ಬಲ ಪಡಿಸುವಂತಿತ್ತು. ಸಂವಿಧಾನವನ್ನೇ ಬದಲಾಯಿಸುವ ಸಾಧ್ಯತೆ ಇದೆ. ಅವರು ಅದನ್ನು ಹೇಳುತ್ತಲೂ ಇದ್ದಾರೆ. ಮುಂದಿನ ದಿನಗಳು ನಿಜಕ್ಕೂ ಜಾತ್ಯಾತೀತ ತತ್ವಗಳಿಗೆ ಮಾರಕವಾಗಲಿದೆ. ಕೋಮುಪ್ರಚೋದನೆ ಮಾತ್ರ ಇವರ ಬಂಡವಾಳ. ಅದನ್ನು ಬಳಸಿಕೊಂಡು ಜನರನ್ನು ದಾರಿಗೆಡಿಸುತ್ತಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವ ಭಾಷಣದ ಮುಖಾಂತರ ಮತಪೆಟ್ಟಿಗೆ ಭದ್ರ ಪಡಿಸುವವರ ವಿರುದ್ಧ ತೀರ್ಮಾನ ಕೈಗೊಳಬೇಕೆಂದಿದ್ದಾರೆ.

ಕಾರ್ಪೊರೇಟ್ ದಿಗ್ಗಜರ ಕೈಗೆ ದೇಶವನ್ನು ನೀಡುತ್ತಿದ್ದಾರೆ. ರೈತರನ್ನು ಕಡೆಗಣಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ವ್ಯಾಪಕವಾಗಿ ಯುವಕರ ಆತ್ಮಹತ್ಯೆ ಪ್ರಕರಣಗಳೂ ಹೆಚ್ಚಾಗಿದೆ. ಅಡುಗೆ ಅನಿಲ ಗ್ರಹ ಬಳಕೆ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೀಗೆ ದೇಶದ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ. ದೇಶದ ಅಭಿವೃದ್ಧಿಯ ಮಾತನಾಡುತ್ತಿರುವವರ ವಿರುದ್ಧ ಎಚ್ಚರ ವಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ದೇಶದ ಅಲ್ಪ ಸಂಖ್ಯಾತರಿಗೆ ಮತ್ತು ದಲಿತ ಹಿಂದುಳಿದ ವರ್ಗಗಳಲ್ಲಿ ಅಭದ್ರತಾ ಭಾವನೆ ಹೆಚ್ಚಾಗುತ್ತಿದೆ. ಮಣಿಪುರದಲ್ಲಿ ಕ್ರೈಸ್ತರ ವಿರುದ್ಧ ನಡೆಯುತ್ತಿರುವಂತಹ ದಾಳಿಯ ಬಗ್ಗೆ ಕೇಂದ್ರ ಮೌನವಾಗಿದೆ. ಪ್ರತಿ ಪಕ್ಷಗಳ ಮೇಲೆ ಇಡಿ ಐಟಿ ದಾಳಿಯ ಮೂಲಕ ಬೆದರಿಸಿ ಬಾಯ್ಮುಚ್ಚಿಸುವ ಶ್ರಮ ನಡೆಯುತ್ತಿವೆ. ತಮ್ಮ ಪಕ್ಷಕ್ಕೆ ಸೇರುವವರಿಗೆ ಕ್ಲೀನ್ ಚಿಟ್ ನೀಡುತ್ತಿದೆ ಘಟನೆಗಳು ನಮ್ಮ ಮುಂದೆ ಇದೆ.

ಈ ದೇಶವನ್ನು ಈ ಸ್ವಾರ್ಥ ಹಿತಾಸಕ್ತಿಗಳಿಂದ ಕಾಪಾಡಬೇಕಾಗಿದೆ. ಮತದಾನ ಎಂಬ ಮೂಲಭೂತ ಹಕ್ಕುಗಳನ್ನು ಚಲಾಯಿಸುವ ಸಮಯ ಕೂಡಿ ಬಂದಿದೆ. ಇದನ್ನು ಸಮರ್ಪಕವಾಗಿ ಬಳಸಬೇಕಾಗಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಇದರಲ್ಲಿ ಭಾಗಿಯಾಗುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಇದರ ಅಗತ್ಯವಿದೆ. ಭಾರತ ಉತ್ತಮ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಇದರಲ್ಲಿ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago