ಕಲಬುರಗಿ: ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಹಾಗೂ ಶಾರದಾ ಮೋಹನ್ ಶೆಟ್ಟಿ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಇತ್ತೀಚೆಗಷ್ಟೇ ಮಾಲೀಕಯ್ಯ ಗುತ್ತೇದಾರ ಅವರ ಸಹೋದರ ನಿತೀನ್ ಗುತ್ತೇದಾರ ಬಿಜೆಪಿ ಸೇರ್ಪಡೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅಧಿಕೃತವಾಗಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದರು.