ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರದಂದು 11 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಲ್ಲಿಯವರೆಗೆ 23 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಸ್ವತಂತ್ರ ಅಭ್ಯರ್ಥಿಯಾಗಿ ವಿಜಯಕುಮಾರ ಭೀಮಶಾ 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಶರಣಬಸಪ್ಪ ಪೀರಪ್ಪ ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಶರಣಪ್ಪ ಮರಲಿಂಗಪ್ಪ ಅವರು 1 ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ಅಭ್ಯರ್ಥಿಯಾಗಿ ವಿಜಯ ಗೋವಿಂದ ಜಾಧವ ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ವೆಂಕಟೇಶ್ವರರಾವ್ ಅಮೃತರಾವ್ ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ರವೀಂದ್ರ ಕಲ್ಲಯ್ಯ ಸ್ವಾಮಿ ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಜ್ಯೋತಿ ರಮೇಶ ಅವರು 1 ನಾಮಪತ್ರ, ಭಾರತೀಯ ಪೀಪಲ್ಸ್ ಪಾರ್ಟಿಯ ಅಭ್ಯರ್ಥಿಯಾಗಿ ಶಂಕರ ಲಿಂಬಾಜಿ ಜಾಧವ ಅವರು 2 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಸುಂದರ ಮೇಘು ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಹುಸೇನಪ್ಪ ಬಂದೆಪ್ಪ ಅವರು 1 ನಾಮಪತ್ರ ಹಾಗೂ ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಿವಪುತ್ರ ಮರೆಪ್ಪ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 23 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಸಿದಂತಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…